ನವದೆಹಲಿ: ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಅವರು ಪೂರ್ವ ಲಡಾಖ್ನ ನೈಜ ನಿಯಂತ್ರಣ ರೇಖೆಯ (ಎಲ್ಎಸಿ) ಮುಂಚೂಣಿ ನೆಲೆಗಳಿಗೆ ಭೇಟಿ ನೀಡಿ ಸೇನಾ ಸಿದ್ಧತೆಯ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.

ಭಾರತೀಯ ಸೇನೆಯ ಮುಖ್ಯಸ್ಥರಾಗಿ ಜವಾಬ್ದಾರಿ ವಹಿಸಿಕೊಂಡ ಎರಡು ವಾರಗಳ ಬಳಿಕ ಅವರು ಪೂರ್ವ ಲಡಾಖ್ಗೆ ಮೂರು ದಿನಗಳ ಭೇಟಿ ಹಮ್ಮಿಕೊಂಡಿದ್ದಾರೆ.

ಮೊದಲ ದಿನವಾದ ಗುರುವಾರ ಅವರು ಲೇಹ್ಗೆ ಭೇಟಿ ನೀಡಿ ಉನ್ನತ ಕಮಾಂಡರ್ಗಳ ಜತೆ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ, ಆ ಪ್ರದೇಶದಲ್ಲಿನ ಪರಿಸ್ಥಿತಿ ಹಾಗೂ ಸನ್ನದ್ಧತೆ ಬಗ್ಗೆ ಕಮಾಂಡರ್ಗಳು ಸೇನಾ ಮುಖ್ಯಸ್ಥರಿಗೆ ಮಾಹಿತಿ ನೀಡಿದ್ದಾರೆ.

ಸನ್ನದ್ಧ ಸೇನೆಯೇ ಆದ್ಯತೆ: ನೂತನ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ

‘ಗಡಿ ಪ್ರದೇಶಗಳ, ವಿಶೇಷವಾಗಿ ಪೂರ್ವ ಲಡಾಖ್ನ ಸದ್ಯದ ಪರಿಸ್ಥಿತಿ ಬಗ್ಗೆ ಸೇನಾ ಮುಖ್ಯಸ್ಥರಿಗೆ ಮಾಹಿತಿ ನೀಡಲಾಗಿದೆ. ಸೇನಾ ಪಡೆಗಳು ಸನ್ನದ್ಧ ಸ್ಥಿತಿಯಲ್ಲಿದ್ದು, ಕಾರ್ಯಾಚರಣೆ ಸನ್ನದ್ಧತೆ ಅತ್ಯುನ್ನತ ಮಟ್ಟದಲ್ಲಿದೆ. ಈ ಬಗ್ಗೆ ಮಾಹಿತಿ ನೀಡಲಾಗಿದೆ’ ಎಂದು ಸೇನೆಯ ಪ್ರಕಟಣೆ ತಿಳಿಸಿದೆ.

ಇಂದು (ಶುಕ್ರವಾರ) ಹಾಗೂ ನಾಳೆ ಮುಂಚೂಣಿ ನೆಲೆಗಳಿಗೆ ಭೇಟಿ ನೀಡಲಿರುವ ಸೇನಾ ಮುಖ್ಯಸ್ಥರು ಯೋಧರ ಜತೆಗೂ ಮಾತುಕತೆ ನಡೆಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.