ಜಮ್ಮು: ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಣೆ ಅವರು ಮಂಗಳವಾರ ಜಮ್ಮು ಜಿಲ್ಲೆಯಲ್ಲಿರುವ ಗಡಿ ನಿಯಂತ್ರಣ ರೇಖೆ(ಎಲ್ಒಸಿ) ಪ್ರದೇಶಗಳಿಗೆ ಭೇಟಿ ನೀಡಿ, ಪರಿಸ್ಥಿತಿ ಅವಲೋಕಿಸಿದರು.

ಎರಡು ದಿನಗಳ ಪ್ರವಾಸಕ್ಕಾಗಿ ಜಮ್ಮುವಿಗೆ ಆಗಮಿಸಿರುವ ಸೇನಾ ಮುಖ್ಯಸ್ಥರು ಗಡಿ ನಿಯಂತ್ರಣ ರೇಖೆಯಲ್ಲಿ ಒಳನುಸುಳಿವಿಕೆ ತಡೆ ಕಾರ್ಯಾಚರಣೆ ಕುರಿತು ಮಾಹಿತಿ ಪಡೆದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಂತರ ವೈಟ್ ನೈಟ್ ಕಾರ್ಪ್ಸ್ ಪ್ರದೇಶಗಳಿಗೆ ಭೇಟಿ ನೀಡಿದ ನರವಣೆ, ಎಲ್ಒಸಿ ಉದ್ದಕ್ಕೂ ಪರಿಸ್ಥಿತಿಯನ್ನು ಖುದ್ದು ಪರಿಶೀಲನೆ ನಡೆಸಿದರು‘ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾಶ್ಮೀರ ಕಣಿವೆಯಲ್ಲಿ ಅಲ್ಪಸಂಖ್ಯಾತರ ಹತ್ಯೆ ನಡೆಯುತ್ತಿರುವ ಸಂದರ್ಭದಲ್ಲಿ ನರವಣೆ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿರುವುದು ಮಹತ್ವ ಪಡೆದುಕೊಂಡಿದೆ. ಇದೇ ತಿಂಗಳು ಕಣಿವೆ ರಾಜ್ಯದಲ್ಲಿ ಉಗ್ರರು 11 ಮಂದಿ ನಾಗರಿಕರನ್ನು ಹತ್ಯೆ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.