ಚೆನ್ನೈ: ಇಲ್ಲಿನ ತೇನಾಂಪೇಟೆಯಲ್ಲಿರುವ ಎಂ.ಜಿ. ರಾಮಚಂದ್ರನ್ (ಎಂ.ಜಿ.ಆರ್) ಅವರ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದ್ದು ತಕ್ಷಣವೇದುಷ್ಕರ್ಮಿಗಳನ್ನು ಬಂಧಿಸಬೇಕು ಎಂದು ತಮಿಳುನಾಡಿನ ವಿರೋಧ ಪಕ್ಷ ಎಐಎಡಿಎಂಕೆಯು, ಆಡಳಿತರೂಢ ಸರ್ಕಾರವನ್ನು ಮಂಗಳವಾರ ಆಗ್ರಹಿಸಿದೆ.

‘ಎಐಎಡಿಎಂಕೆ ಸಂಸ್ಥಾಪಕ ಎಂ.ಜಿ.ಆರ್ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದೆ. ನಮ್ಮ ನಾಯಕನ ಗೌರವಕ್ಕೆ ಕಳಂಕ ತರಲು ಹಾಗೂ ಸಾರ್ವಜನಿಕ ಶಾಂತಿಯನ್ನು ಕದಡಲು ಬಯಸುವ ಇಂತಹವರನ್ನು ಕೂಡಲೇ ಬಂಧಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸುತ್ತೇನೆ’ ಎಂದು ಎಐಎಡಿಎಂಕೆ ಹಂಗಾಮಿ ಪ್ರಧಾನ ಕಾರ್ಯದರ್ಶಿ ಕೆ. ಪಳನಿಸ್ವಾಮಿ ಟ್ವಿಟರ್ ಮೂಲಕ ತಿಳಿಸಿದ್ದಾರೆ.

ಇದೇ ವೇಳೆ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಒ. ಪನ್ನೀರ್ ಸೆಲ್ವಂ ಅವರು ತಮ್ಮ ಅನುಯಾಯಿಗಳೊಂದಿಗೆ ಘಟನೆ ನಡೆದ ಸ್ಥಳಕ್ಕೆ ಧಾವಿಸಿ, ‘ಪ್ರತಿಮೆ ಧ್ವಂಸಗೊಳಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.