ನವದೆಹಲಿ: ‘ಅರುಣಾಚಲ ಪ್ರದೇಶವು ಭಾರತದ ಅವಿಭಾಜ್ಯ ಅಂಗವಾಗಿತ್ತು, ಅಂಗವಾಗಿದೆ ಮತ್ತು ಭವಿಷ್ಯದಲ್ಲೂ ಅವಿಭಾಜ್ಯ ಅಂಗವಾಗಿಯೇ ಇರುತ್ತದೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಸ್ಪಷ್ಟಪಡಿಸಿದೆ.

ಅರುಣಾಚಲ ಪ್ರದೇಶದ ಕುರಿತು ಇತ್ತೀಚೆಗೆ ಚೀನಾ ನೀಡಿದ್ದ ಹೇಳಿಕೆಗೆ ಪ್ರತಿಯಾಗಿ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಈ ಹೇಳಿಕೆ ನೀಡಿದೆ.

‘ಭಾರತದ ರಾಜ್ಯವಾಗಿರುವ ಅರುಣಾಚಲ ಪ್ರದೇಶದ ಭೌಗೋಳಿಕ ಪ್ರದೇಶದ ಕುರಿತು ಚೀನಾದ ರಕ್ಷಣಾ ಸಚಿವಾಲಯದ ವಕ್ತಾರರು ನೀಡಿರುವ ಅಸಂಬದ್ಧ ಹಕ್ಕುಗಳನ್ನು ಮಂಡಿಸುವ ಹೇಳಿಕೆಯನ್ನು ನಾವು ಗಮನಿಸಿದ್ದೇವೆ‘ ಎಂದು ಹೇಳಿಕೆಯಲ್ಲಿ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.

’ಆಧಾರರಹಿತವಾದ ವಾದಗಳನ್ನು ಪುನರಾರ್ತನೆ ಮಾಡುವುದಕ್ಕೆ ಯಾವುದೇ ಮೌಲ್ಯವಿರುವುದಿಲ್ಲ. ಅರುಣಾಚಲ ಪ್ರದೇಶ ಭಾರತದ ಒಕ್ಕೂಟದ ಭಾಗವಾಗಿದೆ. ಅರುಣಾಚಲ ಪ್ರದೇಶದ ಜನರು ನಮ್ಮ ಅಭಿವೃದ್ಧಿ ಕಾರ್ಯಗಳನ್ನು ಮತ್ತು ಮೂಲಸೌಕರ್ಯ ಯೋಜನೆಗಳ ಪ್ರಯೋಜನ ಪಡೆಯುವುದನ್ನು ಮುಂದುವರಿಸುತ್ತಾರೆ‘ ಎಂದು ತಿಳಿಸಿದ್ದಾರೆ.

ಚೀನಾದ ದಕ್ಷಿಣ ಭಾಗವು (ಅರುಣಾಚಲ) ಅವಿಭಾಜ್ಯ ಅಂಗವಾಗಿದೆ. ಅರುಣಾಚಲ ಪ್ರದೇಶವನ್ನು ಭಾರತ ಅಕ್ರಮವಾಗಿ ಅತಿಕ್ರಮಿಸಿಕೊಂಡಿದೆ. ಇದನ್ನು ಚೀನಾ ವಿರೋಧಿಸುತ್ತದೆ ಮತ್ತು ಎಂದಿಗೂ ಒಪ್ಪುವುದಿಲ್ಲ ಎಂದು ಚೀನಾದ ರಕ್ಷಣಾ ಸಚಿವಾಲಯದ ವಕ್ತಾರರಾದ ಝಂಗ್ ಕ್ಸಿಯಾಜಂಗ್ ಹೇಳಿಕೆ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.