ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ ಕೇಜ್ರಿವಾಲ್ ರಾಜೀನಾಮೆ

Published : 17 ಸೆಪ್ಟೆಂಬರ್ 2024, 12:48 IST
Last Updated : 17 ಸೆಪ್ಟೆಂಬರ್ 2024, 12:48 IST
ಫಾಲೋ ಮಾಡಿ
Comments

ನವದೆಹಲಿ: ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ ಕೇಜ್ರಿವಾಲ್ ಅವರು ಮಂಗಳವಾರ ರಾಜೀನಾಮೆ ನೀಡಿದ್ದಾರೆ.

ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ಅವರನ್ನು ಭೇಟಿ ಮಾಡಿ ಅರವಿಂದ ಕೇಜ್ರಿವಾಲ್ ಅವರು ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.

ಈ ವೇಳೆ ದೆಹಲಿ ಸಿಎಂ ಆಗಿ ನೂತನವಾಗಿ ಆಯ್ಕೆ ಆಗಿರುವ ಆತಿಶಿ ಸೇರಿದಂತೆ ಇತರೆ ಆಮ್‌ ಆದ್ಮಿ ಪಕ್ಷದ ನಾಯಕರು ಜತೆಗಿದ್ದರು.

ಲೆಫ್ಟಿನೆಂಟ್ ಗವರ್ನರ್ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆತಿಶಿ, ನೂತನ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದೇವೆ. ದೆಹಲಿ ಜನರ ಹಿತಾಸಕ್ತಿಗಳನ್ನು ರಕ್ಷಿಸುತ್ತೇವೆ ಎಂದು ತಿಳಿಸಿದ್ದಾರೆ.

‘ಜನರು ಪ್ರಾಮಾಣಿಕತೆಯ ಪ್ರಮಾಣ ಪತ್ರವನ್ನು ನೀಡಿದಾಗ ನಾನು ಮತ್ತೆ ಮುಖ್ಯಮಂತ್ರಿ ಹುದ್ದೆಯಲ್ಲಿ ಕುಳಿತುಕೊಳ್ಳುತ್ತೇನೆ‘. ಇನ್ನೆರಡು ದಿನದಲ್ಲಿ ರಾಜೀನಾಮೆ ನೀಡುತ್ತೇನೆ ಎಂದು ಕೇಜ್ರಿವಾಲ್ ಭಾನುವಾರ ಹೇಳಿದ್ದರು.

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿದ್ದ ಕೇಜ್ರಿವಾಲ್ ಅವರು ಜಾಮೀನು ಪಡೆದು ಶುಕ್ರವಾರ ಜೈಲಿನಿಂದ ಬಿಡುಗಡೆ ಆಗಿದ್ದಾರೆ. ಎಎಪಿ ಶಾಸಕರ ಸಭೆಯನ್ನು ಇನ್ನು ಎರಡು ದಿನಗಳಲ್ಲಿ ನಡೆಸಲಾಗುತ್ತದೆ. ಪಕ್ಷದ ನಾಯಕರೊಬ್ಬರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಾರೆ ಎಂದು ಕೇಜ್ರಿವಾಲ್ ಪ್ರಕಟಿಸಿದ್ದರು.

ಸುದ್ದಿಗಾರರೊಂದಿಗೆ ಮಾತನಾಡಿದ ಆತಿಶಿ, ನೂತನ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದೇವೆ. ದೆಹಲಿ ಜನರ ಹಿತಾಸಕ್ತಿಗಳನ್ನು ರಕ್ಷಿಸುತ್ತೇವೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT