ನವದೆಹಲಿ: ದೆಹಲಿ ಸರ್ಕಾರದ ಅಬಕಾರಿ ನೀತಿ ಹಗರಣದಲ್ಲಿನ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿಯಿಂದ ಬಂಧಿತರಾಗಿರುವ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರನ್ನು 15 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇಡಿ ಕಸ್ಟಡಿ ಅವಧಿ ಇಂದು ಮುಕ್ತಾಯವಾದ ಹಿನ್ನೆಲೆ ಕೇಜ್ರಿವಾಲ್ ಅವರನ್ನು ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಈ ವೇಳೆ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹಾಜರಾದ ವಕೀಲ ಎಸ್‌ವಿ ರಾಜು, ‘ಕೇಜ್ರಿವಾಲ್ ಅವರು ವಿಚಾರಣೆಯ ವೇಳೆ ನಮ್ಮ ಪ್ರಶ್ನೆಗಳಿಗೆ ಉತ್ತರ ನೀಡುವುದರಿಂದ ತಪ್ಪಿಸಿಕೊಳ್ಳುತ್ತಿದ್ದಾರೆ ಅಲ್ಲದೆ, ಅವರು ತಮ್ಮ ಫೋನ್ ಪಾಸ್‌ವರ್ಡ್‌ಗಳನ್ನು ನೀಡಲು ನಿರಾಕರಿಸಿದ್ದಾರೆ. ಮುಂದಿನ ವಿಚಾರಣೆ ನಡೆಸುವವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ’ ಎಂದು ಮನವಿ ಮಾಡಿದ್ದಾರೆ.

ಅರ್ಜಿ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ಕೇಜ್ರಿವಾಲ್ ಅವರನ್ನು ಏಪ್ರಿಲ್ 15ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.