ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಅರವಿಂದ ಕೇಜ್ರಿವಾಲ್ ಭಾನುವಾರ ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಳಿಗ್ಗೆ 8 ರಿಂದ ಮಧ್ಯಾಹ್ನ 2ರವರೆಗೆ ರಾಮ್ಲೀಲಾ ಮೈದಾನದ ಸುತ್ತ ನಿರ್ಬಂಧ ವಿಧಿಸಲಾಗಿದೆ.

ರಾಮಲೀಲಾ ಮೈದಾನದಲ್ಲಿ ನಡೆಯುವ ಅದ್ಧೂರಿ ಸಮಾರಂಭದಲ್ಲಿ ಕೇಜ್ರಿವಾಲ್ ಸಂಪುಟದ ಇತರ ಸಚಿವರೊಂದಿಗೆ ಮಧ್ಯಾಹ್ನ 12.15ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಆಹ್ವಾನ ನೀಡಲಾಗಿದೆ.

ರಾಮ್ಲೀಲಾ ಮೈದಾನಕ್ಕೆ ತೆರಳುವ ದಾರಿಯಲ್ಲೆಲ್ಲ ಅರವಿಂದ ಕೇಜ್ರಿವಾಲ್ ಅವರ ಭಾವಚಿತ್ರವಿರುವ ಮತ್ತು 'ಧನ್ಯವಾದ್ ದಿಲ್ಲಿ' ಎಂಬ ಸಂದೇಶವಿರುವ ದೊಡ್ಡ ಬ್ಯಾನರ್ಗಳನ್ನು ಕಟ್ಟಲಾಗಿದೆ.

ಇದನ್ನೂ ಓದಿ:‘ಆಮ್ ಆದ್ಮಿ’ಯ ಹೋರಾಟದ ಬದುಕು: ಹೀಗಿತ್ತು ಅರವಿಂದ ಕೇಜ್ರಿವಾಲ್ ಸಾಗಿಬಂದ ಹಾದಿ

51 ವರ್ಷದ ಕೇಜ್ರಿವಾಲ್ ಅವರಿಗೆದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರು ರಾಮ್ಲೀಲಾ ಮೈದಾನದಲ್ಲಿ ಪ್ರಮಾಣವಚನ ಬೋಧಿಸಲಿದ್ದಾರೆ.

'ದೆಹಲಿಯ ಮಗ' ಎಂದು ತಮ್ಮನ್ನು ತಾವು ಕರೆದುಕೊಂಡಿರುವಕೇಜ್ರಿವಾಲ್,ತಮ್ಮ ಪ್ರಮಾಣವಚನ ಸಮಾರಂಭಕ್ಕಾಗಿ ದೆಹಲಿ ಜನರಿಗೆ ಆಹ್ವಾನ ನೀಡಿದ್ದಾರೆ ಮತ್ತು 'ಇಷ್ಟು ದೊಡ್ಡ ಪ್ರಮಾಣದಲ್ಲಿ ಜನರು ಹೊಸ ರಾಜಕೀಯಕ್ಕೆ ಸೇರ್ಪಡೆಗೊಳ್ಳುತ್ತಿರುವುದಕ್ಕೆ ನನಗೆ ತುಂಬಾ ಖುಷಿಯಾಗಿದೆ. ಕಾಮ್ ಕಿ ರಾಜ್ನೀತಿ' ಎಂದು ಟ್ವೀಟ್ ಮಾಡಿದ್ದಾರೆ.

ಶನಿವಾರವಷ್ಟೇ ಟ್ವೀಟ್ ಮಾಡಿದ್ದ ಕೇಜ್ರಿವಾಲ್, ಆಟೋರಿಕ್ಷಾ ಚಾಲಕರು, ವಿದ್ಯಾರ್ಥಿಗಳು, ಶಿಕ್ಷಕರು, ವೈದ್ಯರು, ಕಾರ್ಮಿಕರು ಸೇರಿದಂತೆ ಇನ್ನಿತರರು ಮುಖ್ಯ ಅತಿಥಿಗಳಾಗಿರುತ್ತಾರೆ ಎಂದು ಹೇಳಿದ್ದರು.

ದೆಹಲಿಯ ಶಿಕ್ಷಣ ನಿರ್ದೇಶನಾಲಯ (ಡಿಒಇ) ಮಂಡಳಿಯು ಎಲ್ಲ ಸರ್ಕಾರಿ ಶಾಲೆಯ ಪ್ರಾಂಶುಪಾಲರು ಪ್ರಮಾಣವಚನ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದೆ. ಇದರೊಂದಿಗೆ ಉಪ ಪ್ರಾಂಶುಪಾಲರು, ಉದ್ಯಮಶೀಲ ಪಠ್ಯಕ್ರಮ ಸಂಯೋಜಕರು, ಸಂತೋಷ ಸಂಯೋಜಕರು ಮತ್ತು ಶಿಕ್ಷಕರ ಅಭಿವೃದ್ಧಿ ಸಂಯೋಜಕರು ಸಹ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಕೋರಲಾಗಿದೆ.

ಇದನ್ನೂ ಓದಿ:ಪ್ರಮಾಣ ವಚನ ಸ್ವೀಕಾರ: ಪ್ರಧಾನಿ ಮೋದಿಗೆ ಆಹ್ವಾನ ನೀಡಿದ ಅರವಿಂದ ಕೇಜ್ರಿವಾಲ್

70 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ದೆಹಲಿಯಲ್ಲಿ 62 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಆಮ್ ಆದ್ಮಿ ಪಕ್ಷ ಅದ್ಭುತ ಯಶಸ್ಸನ್ನು ಸಾಧಿಸಿತ್ತು. ಇದರೊಂದಿಗೆ ಬಿಜೆಪಿ ಕೇವಲ 9 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡರೆ, ಕಾಂಗ್ರೆಸ್ ತನ್ನ ಶೂನ್ಯ ಸಾಧನೆಯನ್ನೇ ಮುಂದುವರಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.