ವಾರಾಣಸಿ: ಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆಯ ವರದಿ ಸಲ್ಲಿಸಲು ಇನ್ನೂ 15 ದಿನಗಳ ಕಾಲಾವಕಾಶ ನೀಡುವಂತೆ ಕೋರಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು (ಎಎಸ್ಐ) ಶುಕ್ರವಾರ ನ್ಯಾಯಾಯಲಕ್ಕೆ ಅರ್ಜಿ ಸಲ್ಲಿಸಿದೆ.

ಮಸೀದಿ ಸಂಕೀರ್ಣದ ಸಮೀಕ್ಷೆಯು ಪೂರ್ಣಗೊಂಡಿದ್ದು, ತಾಂತ್ರಿಕ ವರದಿಗಳು ಇನ್ನಷ್ಟೇ ಬರಬೇಕಿದೆ. ಈ ಹಿನ್ನೆಲೆಯಲ್ಲಿ ವರದಿ ಸಲ್ಲಿಸಲು ಹೆಚ್ಚುವರಿ ಸಮಯಾವಕಾಶ ನೀಡಲು ಕೋರಿ ವಾರಾಣಸಿ ಜಿಲ್ಲಾ ನ್ಯಾಯಾಲಯದಲ್ಲಿ ಎಎಸ್ಐ ಅರ್ಜಿ ಸಲ್ಲಿಸಿದೆ ಎಂದು ಕೇಂದ್ರ ಸರ್ಕಾರದ ಪರ ವಕೀಲ ಅಮಿತ್ ಶ್ರೀವಾಸ್ತವ ತಿಳಿಸಿದ್ದಾರೆ.

ಸಮೀಕ್ಷೆಯು ಪೂರ್ಣಗೊಂಡಿದೆ. ಆದರೆ, ಸಮೀಕ್ಷೆ ಕಾರ್ಯಕ್ಕೆ ಬಳಸಿದ ಸಾಧನಗಳನ್ನು ವರದಿಯಲ್ಲಿ ಸೇರಿಸಬೇಕಿದೆ. ಹೀಗಾಗಿ ವರದಿ ಸಲ್ಲಿಸಲು ನವೆಂಬರ್ 17ರವರೆಗೆ ಸಮಯಾವಕಾಶ ಬೇಕು ಎಂದು ನವೆಂಬರ್ 2ರಂದು ನ್ಯಾಯಾಲಯಕ್ಕೆ ಎಎಸ್ಐ ತಿಳಿಸಿತ್ತು.

ಸಮೀಕ್ಷೆಯ ವರದಿ ಸಲ್ಲಿಸಲು ಅಕ್ಟೋಬರ್ 4ರಂದು ನಾಲ್ಕು ವಾರಗಳ ಕಾಲಾವಕಾಶ ನೀಡಿದ್ದ ನ್ಯಾಯಾಲಯವು, ಇದಕ್ಕಿಂತಲೂ ಹೆಚ್ಚಿನ ಕಾಲಾವಕಾಶ ನೀಡಲು ಸಾಧ್ಯವಿಲ್ಲ ಎಂದು ಹೇಳಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.