ಭುವನೇಶ್ವರ: ಜಗನ್ನಾಥ ದೇವಾಲಯದ ‘ರತ್ನ ಭಂಡಾರ’ ಕುರಿತ ತಾಂತ್ರಿಕ ಸಮೀಕ್ಷೆಯನ್ನು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ಶನಿವಾರದಿಂದ ಮತ್ತೆ ಆರಂಭಿಸಲಿದೆ ಎಂದು ಶ್ರೀ ಜಗನ್ನಾಥ ದೇವಸ್ಥಾನ ಆಡಳಿತ (ಎಸ್‌ಜೆಟಿಎ) ಹೇಳಿದೆ.

‘ಸೆ.21, 22 ಹಾಗೂ 23ರಂದು ಮಧ್ಯಾಹ್ನ 1ರಿಂದ ಸಂಜೆ 6ರ ವರೆಗೆ ಈ ಸಮೀಕ್ಷೆ ನಡೆಯಲಿದೆ’ ಎಂದು ಎಸ್‌ಜೆಟಿಎ ಮುಖ್ಯ ಅಧಿಕಾರಿ ಅರವಿಂದ ಪಾಢಿ ಶುಕ್ರವಾರ ತಿಳಿಸಿದ್ದಾರೆ.

‘ಸಮೀಕ್ಷೆ ಹಿನ್ನೆಲೆಯಲ್ಲಿ, ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರಿಗೆ ಕೆಲ ನಿರ್ಬಂಧಗಳನ್ನು ವಿಧಿಸಲಾಗುತ್ತದೆ. ಸಮೀಕ್ಷೆ ನಡೆಯುವ ಸಮಯದಲ್ಲಿ ದೇವಸ್ಥಾನದ ದ್ವಾರಗಳನ್ನು ಮುಚ್ಚಲಾಗುತ್ತದೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಸರಾ ಮತ್ತು ಕಾರ್ತಿಕ ಮಾಸದಲ್ಲಿ ದೇವಸ್ಥಾನದಲ್ಲಿ ವಿಶೇಷ ಧಾರ್ಮಿಕ ವಿಧಿಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಈ ಕಾರಣದಿಂದ ಸೆ.24ರ ಒಳಗಾಗಿ ‘ರತ್ನ ಭಂಡಾರ’ದ ತಾಂತ್ರಿಕ ಸಮೀಕ್ಷೆಯನ್ನು ಪೂರ್ಣಗೊಳಿಸುವಂತೆ ಎಎಸ್‌ಐ ಪ್ರಧಾನ ನಿರ್ದೇಶಕರಿಗೆ ದೇವಸ್ಥಾನದ ಆಡಳಿತ ಸೆ.18ರಂದು ಪತ್ರ ಬರೆದು ಮನವಿ ಮಾಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.