ಗುವಾಹಟಿ: ಅಸ್ಸಾಂನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಪ್ರವಾಹದ ಪರಿಸ್ಥಿತಿ ಮತ್ತಷ್ಟು ತೀವ್ರಗೊಂಡಿದೆ. 29 ಜಿಲ್ಲೆಗಳಲ್ಲಿ 16.50 ಲಕ್ಷಕ್ಕೂ ಅಧಿಕ ಮಂದಿ ತೊಂದರೆಗೀಡಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರಾಜ್ಯದ ಪ್ರಮುಖ ನದಿಗಳಾದ ಬ್ರಹ್ಮಪುತ್ರ, ದಿಗಾರೂ ಮತ್ತು ಕೊಲೊಂಗ್ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಹಲವು ಪ್ರದೇಶಗಳು ಜಲಾವೃತಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ, ಇಂದು (ಗುರುವಾರ) ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದು, ಪರಿಸ್ಥಿತಿಯನ್ನು ಅವಲೋಕಿಸಲಿದ್ದಾರೆ.

ಬುಧವಾರ ರಾತ್ರಿ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದ ಸಿಎಂ, ಸಂತ್ರಸ್ತರಿಗೆ ಪರಿಹಾರ, ಪುನರ್ವಸತಿ ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದರು. ಪ್ರವಾಹಪೀಡಿತ ಜಿಲ್ಲೆಗಳಲ್ಲಿ ಸಂಪುಟ ಸಚಿವರು ಮೊಕ್ಕಾಂ ಹೂಡಲಿದ್ದಾರೆ.

ಪ್ರವಾಹ, ಭೂಕುಸಿತ, ಮಳೆ ಸಂಬಂಧಿತ ಅವಘಡಗಳಲ್ಲಿ ರಾಜ್ಯದಲ್ಲಿ ಈವರೆಗೆ 56 ಮಂದಿ ಮೃತಪಟ್ಟಿದ್ದು, ಮೂವರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಧುಬ್ರಿ ಜಿಲ್ಲೆಯಲ್ಲಿ ಅತಿ ಹೆಚ್ಚು2.23 ಲಕ್ಷಕ್ಕೂ ಅಧಿಕ, ದರಾಂಗ್ನಲ್ಲಿ 1.84 ಲಕ್ಷಕ್ಕೂ ಅಧಿಕ ಮತ್ತು ಲಕ್ಷ್ಮೀಪುರ ಜಿಲ್ಲೆಯಲ್ಲಿ 1.66 ಲಕ್ಷಕ್ಕೂ ಅಧಿಕ ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ.
.Assam Flood | ಮುಂದುವರಿದ ಪ್ರವಾಹ; 11.5 ಲಕ್ಷಕ್ಕೂ ಹೆಚ್ಚು ಜನರಿಗೆ ತೊಂದರೆ.Arunachal Pradesh| ಮುಂದುವರಿದ ಪ್ರವಾಹ ಪರಿಸ್ಥಿತಿ; 60 ಸಾವಿರ ಜನರಿಗೆ ತೊಂದರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.