ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ: 1.7 ಲಕ್ಷಕ್ಕೂ ಹೆಚ್ಚು ಜನರಿಗೆ ಸಂಕಷ್ಟ

Published : 25 ಜೂನ್ 2024, 9:37 IST
Last Updated : 25 ಜೂನ್ 2024, 9:37 IST
ಫಾಲೋ ಮಾಡಿ
Comments

ಗುವಾಹಟಿ: ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿಯು ಸ್ವಲ್ಪ ಮಟ್ಟಿಗೆ ಸುಧಾರಿಸಿದ್ದು, ಪ್ರಮುಖ ನದಿಗಳ ನೀರಿನ ಮಟ್ಟ ಇಳಿಕೆಯಾಗಿದೆ. ಆದರೆ 1.7 ಲಕ್ಷ ಜನರು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎಎಸ್‌ಡಿಎಂಎ) ಮಂಗಳವಾರ ತಿಳಿಸಿದೆ.

ಬಜಾಲಿ, ಬರ್ಪೇಟ, ಕಾಚಾರ್ , ದರ್ರಾಂಗ್ , ಗೋಲ್‌ಪಾರಾ, ಕಾಮರೂಪ್, ಕರೀಮ್‌ಗಂಜ್, ನಾಗಾಂವ್ ಮತ್ತು ಹೊಜೈ ಜಿಲ್ಲೆಗಳಲ್ಲಿ 1,70,377 ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಈ ವರ್ಷದಲ್ಲಿ ಸಂಭವಿಸಿದ ಚಂಡಮಾರುತ, ಪ್ರವಾಹ ಸೇರಿದಂತೆ ಭೂಕುಸಿತ ಸಂಬಂಧಿತ ಅವಘಡಗಳಲ್ಲಿ ಮೃತಪಟ್ಟವರ ಸಂಖ್ಯೆ 40ಕ್ಕೆ ಏರಿದೆ ಎಂದು ಎಎಸ್‌ಡಿಎಂಎ ಪ್ರಕಟಣೆಯಲ್ಲಿ ತಿಳಿಸಿದೆ.

ಕರೀಮ್‌ಗಂಜ್‌ನಲ್ಲಿ 96,440 ಜನರು, ಕಾಚಾರ್‌ನಲ್ಲಿ 52,400 ಕ್ಕೂ ಹೆಚ್ಚು ಜನರು, ದರ್ರಾಂಗ್‌ನಲ್ಲಿ ಸುಮಾರು 10,802 ಜನರು ತೊಂದರೆಗೆ ಸಿಲುಕಿದ್ದಾರೆ. ಇವು ಅತಿ ಹೆಚ್ಚು ಪ್ರವಾಹ ಪರಿಸ್ಥಿತಿಗೆ ಒಳಗಾದ ಜಿಲ್ಲೆಗಳಾಗಿವೆ.

ಕರೀಮ್‌ಗಂಜ್‌ನ ಕುಶಿಯಾರಾ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಉಳಿದಂತೆ ಕಳೆದ ಎರಡು ದಿನಗಳಿಂದ ಮಳೆ ಕಡಿಮೆ ಆಗಿರುವುದರಿಂದ ಪ್ರಮುಖ ನದಿಗಳು ಮತ್ತು ಅವುಗಳ ಉಪನದಿಗಳ ನೀರಿನ ಮಟ್ಟ ಕೊಂಚ ಕಡಿಮೆಯಾಗಿದೆ.

ಪ್ರವಾಹದ ಪರಿಸ್ಥಿತಿಯಿಂದಾಗಿ ಒಟ್ಟು 13,094 ಜನರು 149 ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ. ಕನಿಷ್ಠ 641 ಗ್ರಾಮಗಳು ಪ್ರವಾಹದ ಪರಿಸ್ಥಿತಿಗೆ ತತ್ತರಿಸಿದೆ. ರಾಜ್ಯದಲ್ಲಿ ಒಟ್ಟು 2,273.44 ಹೆಕ್ಟೇರ್ ಬೆಳೆ ಹಾನಿಯಾಗಿದೆ ಎಂದು ಎಎಸ್‌ಡಿಎಂಎ ಹೇಳಿದೆ.

ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ರಸ್ತೆಗಳು, ಸೇತುವೆಗಳು ಸೇರಿದಂತೆ ಇತರೆ ಮೂಲಸೌಕರ್ಯಗಳು ಹಾನಿಗೊಳಗಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT