ಗುವಾಹಟಿ: ‘ಬಡತನ ಮತ್ತು ಅನಕ್ಷರತೆ ನಿರ್ಮೂಲನೆ ಮಾಡುವ ಉದ್ದೇಶದಿಂದ ಅಲ್ಪಸಂಖ್ಯಾತರ ಜನಸಂಖ್ಯೆ ಬೆಳವಣಿಗೆಯನ್ನು ನಿಧಾನಗೊಳಿಸಲು ಸರ್ಕಾರ ನಿರ್ದಿಷ್ಟ ನೀತಿಯನ್ನು ಅಳವಡಿಸಿಕೊಳ್ಳಲಿದೆ’ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

‘ಆರೋಗ್ಯ, ಶೈಕ್ಷಣಿಕ ಉಪಕ್ರಮಗಳನ್ನು ವಿಸ್ತರಿಸುವುದು ಮತ್ತು ಮುಸ್ಲಿಂ ಜನಸಂಖ್ಯೆ ಬೆಳವಣಿಗೆಯನ್ನು ಪರಿಶೀಲಿಸುವುದು ರಾಜ್ಯ ಸರ್ಕಾರದ ಪ್ರಾಥಮಿಕ ಉದ್ದೇಶವಾಗಿದೆ’ ಎಂದು ಶರ್ಮಾ ಅವರು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

‘ಇದೊಂದು ರಾಜಕೀಯ ವಿಷಯವಲ್ಲ. ನಮ್ಮ ತಾಯಂದಿರ ಮತ್ತು ಸಹೋದರಿಯರ ಯೋಗಕ್ಷೇಮ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಸಮುದಾಯದ ಯೋಗಕ್ಷೇಮ ಮುಖ್ಯ’ ಎಂದು ಅವರು ಪ್ರತಿಪಾದಿಸಿದರು.

‘ಅಸ್ಸಾಂ ತನ್ನ ವಾರ್ಷಿಕ ಜನಸಂಖ್ಯೆ ಬೆಳವಣಿಗೆಯನ್ನು ಶೇ 1.6ಕ್ಕೆ ನಿರ್ವಹಿಸಲು ಸಮರ್ಥವಾಗಿದೆ. ಆದರೆ ಅಂಕಿ–ಅಂಶಗಳನ್ನು ಗಮನಿಸಿದಾಗ ಮುಸ್ಲಿಂ ಜನಸಂಖ್ಯೆಯ ಬೆಳವಣಿಗೆಯು ಶೇ 29ರ ದರದಲ್ಲಿದೆ ಎಂಬುದು ತಿಳಿದು ಬಂದಿದೆ. ಹಿಂದೂಗಳ ಜನಸಂಖ್ಯೆ ಬೆಳವಣಿಗೆ ಶೇ 10ರ ದರದಲ್ಲಿದೆ’ ಎಂದೂ ಅವರು ಹೇಳಿದ್ದಾರೆ.

‘ಮುಸ್ಲಿಂ ಸಮುದಾಯದ ಮುಖಂಡರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಸಮುದಾಯದಲ್ಲಿ ನಾಯಕತ್ವವನ್ನು ಸೃಷ್ಟಿಸಲು ಮುಂದಿನ ತಿಂಗಳು ಕೆಲವು ಸಂಸ್ಥೆಗಳೊಂದಿಗೆ ಸಮಾಲೋಚನೆ ನಡೆಸಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.