ಇಂಫಾಲ್: ಮಣಿಪುರದ ತೆಂಗ್ನೌಪಾಲ್ ಜಿಲ್ಲೆಯ ಸೈಬೋಲ್ ಪ್ರದೇಶದಲ್ಲಿ ಅಸ್ಸಾಂ ರೈಫಲ್ಸ್ನ ಸ್ಫೋಟಕ ಪ್ರತಿಬಂಧಕ ವಾಹನವೊಂದು ಗುರುವಾರ ಗಸ್ತು ತಿರುಗುತ್ತಿದ್ದಾಗ ಉಗ್ರರು ಇರಿಸಿದ್ದ ಕಚ್ಚಾ ಬಾಂಬ್ (ಐಇಡಿ) ಸ್ಫೋಟಗೊಂಡಿದೆ.

‘ಅಸ್ಸಾಂ ರೈಫಲ್ಸ್ನ ಯೋಧರು ದೈನಂದಿನ ಗಸ್ತು ಕಾರ್ಯದಲ್ಲಿ ತೊಡಗಿದ್ದಾಗ ಕಡಿಮೆ ತೀವ್ರತೆಯ ಕಚ್ಚಾ ಬಾಂಬ್ ಸ್ಫೋಟಗೊಂಡಿದ್ದು, ವಾಹನದೊಳಗಿದ್ದ ಯಾರಿಗೂ ಗಾಯಗಳಾಗಿಲ್ಲ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಫೋಟ ನಡೆದ ಬಳಿಕ ಉಗ್ರನೊಬ್ಬ ವಾಹನ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ಯೋಧರು ಪ್ರತಿದಾಳಿ ನಡೆಸಿದ್ದಾರೆ’ ಎಂದು ವಿವರಿಸಿದ್ದಾರೆ.

ಉಗ್ರರ ಪತ್ತೆಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.