ಗುವಾಹಟಿ: ಸುಮಾರು ₹10 ಕೋಟಿ ಮೌಲ್ಯದ ಗಾಂಜಾ ಸಾಗಿಸುತ್ತಿದ್ದ ಇಬ್ಬರನ್ನು ಅಸ್ಸಾಂನ ಗುವಾಹಟಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಡಿಐಜಿ ಪಾರ್ಥಸಾರಥಿ ಮಹಾಂತ ನೇತೃತ್ವದ ಅಸ್ಸಾಂ ಪೊಲೀಸ್‌ನ ವಿಶೇಷ ಕಾರ್ಯಪಡೆ ಬಸಿಸ್ಟಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾರ್ಯಚರಣೆ ನಡೆಸಿದೆ. ಈ ವೇಳೆ ಕಚ್ಚಾ ರಬ್ಬರ್‌ನಡಿ 4 ಸಾವಿರ ಕೆ.ಜಿ ಗಾಂಜಾ ಸಾಗಿಸುತ್ತಿದ್ದ ಲಾರಿಯನ್ನು ಪರಿಶೀಲನೆ ನಡೆಸಿದ್ದಾರೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
.ಬೀದರ್ | ₹15 ಕೋಟಿ ಗಾಂಜಾ ಜಪ್ತಿ, ಜಾಲ ನಾಶ: ಚನ್ನಬಸವಣ್ಣ ಎಸ್.ಎಲ್..
ವಶಪಡಿಸಿಕೊಳ್ಳಲಾದ ವಸ್ತುಗಳನ್ನು ತ್ರಿಪುರಾದಿಂದ ಮಧ್ಯಭಾರತದ ರಾಜ್ಯವೊಂದಕ್ಕೆ ಸಾಗಿಸಲಾಗುತ್ತಿತ್ತು. ವಶಪಡಿಸಿಕೊಂಡ ವಸ್ತುಗಳ ಮಾರುಕಟ್ಟೆ ಮೌಲ್ಯ ಸುಮಾರು ₹10 ಕೋಟಿ ಎಂದು ಡಿಐಜಿ ಮಹಾಂತ ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಇಬ್ಬರನ್ನು ಬಂಧಿಸಲಾಗಿದ್ದು, ಅಗತ್ಯ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.