ನವದೆಹಲಿ: ಆರಂಭಿಕ ಟ್ರೆಂಡ್ ಪ್ರಕಾರ ಚಮ್ಕೌರ್ ಸಾಹಿಬ್ ಕ್ಷೇತ್ರದಿಂದ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇದೇ ವೇಳೆ ಭದೌರ್ ಕ್ಷೇತ್ರದಲ್ಲಿ ಹಿನ್ನಡೆ ಅನುಭವಿಸಿದ್ದಾರೆ.

ಚನ್ನಿ ಅವರು ಚಮ್ಕೌರ್ ಸಾಹಿಬ್ ಹಾಗೂ ಭದೌರ್ ವಿಧಾನಸಭೆ ಕ್ಷೇತ್ರಗಳಿಂದ ಸ್ಪರ್ಧಿಸಿದ್ದರು.

ಸದ್ಯ ಎಎಪಿ ಅಧಿಕ ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ ಎರಡನೇ ಸ್ಥಾನದಲ್ಲಿ ಮುನ್ನಡೆಯಲ್ಲಿದೆ.

ಇದನ್ನೂ ಓದಿ:Assembly Poll Results Live | ಪಂಚರಾಜ್ಯ ಚುನಾವಣೆ ಫಲಿತಾಂಶ: ಉತ್ತರಾಖಂಡದಲ್ಲಿ ಬಿಜೆಪಿಗೆ ಬಹುಮತ, ಸಿಎಂ ಧಾಮಿ ಹಿನ್ನಡೆ

ಬೆಳಗ್ಗೆ 9.55ರ ಸುಮಾರಿಗೆ ಆಮ್ ಆದ್ಮಿ ಪಕ್ಷ 84 ಮತ್ತು ಕಾಂಗ್ರೆಸ್ 18 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ. ಅಕಾಲಿದಳ 8 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಬಿಜೆಪಿ ಮೈತ್ರಿ ಕೇವಲ 3 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಪೂರ್ವ ಅಮೃತಸರದಿಂದ ಸ್ಪರ್ಧಿಸಿರುವ ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್ ಸಿಧು ಹಿನ್ನೆಡೆ ಸಾಧಿಸಿದ್ದಾರೆ. ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಕೂಡ ಸ್ವಕ್ಷೇತ್ರ ಪಟಿಯಾಲದಲ್ಲಿ ಹಿನ್ನೆಡೆ ಅನುಭವಿಸಿದ್ದಾರೆ. ಇವರು ಆಮ್ ಆದ್ಮಿ ಪಕ್ಷದ ಅಜಿತ್ ಪಾಲ್ ಸಿಂಗ್ ಕೊಹ್ಲಿ ವಿರುದ್ಧ ಕಣಕ್ಕಿಳಿದಿದ್ದರು. ಲಂಬಿ ಕ್ಷೇತ್ರದಲ್ಲಿ ಶಿರೋಮಣಿ ಅಕಾಲಿ ದಳದ ನಾಯಕ ಪ್ರಕಾಶ್ ಸಿಂಗ್ ಬಾದಲ್ ಅವರಿಗೆ ಕೂಡ ಹಿನ್ನಡೆಯಾಗಿದೆ.

ಕಳೆದ ಚುನಾವಣೆಯಲ್ಲಿ 20 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿದ್ದ ಎಎಪಿ, ಈ ಬಾರಿ ಬಹುಮತದೊಂದಿಗೆ ಸರ್ಕಾರ ರಚನೆ ಮಾಡುವ ಸೂಚನೆಯನ್ನು ಮತಗಟ್ಟೆ ಸಮೀಕ್ಷೆಗಳು ವ್ಯಕ್ತಪಡಿಸಿವೆ. ಒಟ್ಟು 117 ವಿಧಾನಸಭಾ ಕ್ಷೇತ್ರಗಳಲ್ಲಿ ಯಾವುದೇ ಪಕ್ಷ ಸರ್ಕಾರ ರಚಿಸಲು 59 ಸ್ಥಾನಗಳಲ್ಲಿ ಗೆಲುವು ಸಾಧಿಸಬೇಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.