ಜೋಧ್ಪುರ್: ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೇರಲಿದ್ದು, ಬಿಜೆಪಿಯು ಕೇವಲ 50 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗು ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅಭಿಪ್ರಾಯಪಟ್ಟರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‘ಈ ಬಾರಿ ಸರ್ಕಾರ ಬದಲಾಗಲಿದೆ. ಕಾಂಗ್ರೆಸ್ ಪಕ್ಷವು ಸ್ಪಷ್ಟ ಬಹುಮತದೊಂದಿಗೆ ರಾಜಸ್ಥಾನದಲ್ಲಿ ಸರ್ಕಾರ ರಚಿಸಲಿದೆ. ರಾಜ್ಯದ ಜನರಲ್ಲಿಯೂ ಇದೇ ಭಾವವಿದೆ. ಬಿಜೆಪಿಯು 50 ಸ್ಥಾನಗಳನ್ನು ಗೆಲ್ಲಬಹುದು’ ಎಂದರು.

ಇದಕ್ಕೂ ಮೊದಲು ಚುನಾವಣೆ ಬಗ್ಗೆ ಮಾತನಾಡಿದ್ದ ಮುಖ್ಯಮಂತ್ರಿ ವಸುಂಧರಾ ರಾಜೇ, ತಮ್ಮ ಸರ್ಕಾರವು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು, ಜನರಿಗೆ ಅದರ ಅರಿವಿದೆ. ಅದು ಬಿಜೆಪಿಗೆ ಬಲ ತುಂಬಲಿದೆ ಎಂದು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದರು.

ರಾಜಸ್ಥಾನದ ಒಟ್ಟು 51,667 ಮತಗಟ್ಟೆಗಳಲ್ಲಿ ಬೆಳಿಗ್ಗೆ 8 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 5ಕ್ಕೆ ಮುಕ್ತಾಯವಾಗಲಿದೆ. ಸದ್ಯಮತದಾನ ಪ್ರಕ್ರಿಯೆ ಮುಂದುವರಿದಿದ್ದು, 11 ಗಂಟೆ ಹೊತ್ತಿಗೆ ಶೇ. 21.89 ರಷ್ಟು ಮತ ಚಲಾವಣೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.