ಮಂಗಳವಾರ, 8 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Election Results LIVE: ಹರಿಯಾಣದಲ್ಲಿ ಬಿಜೆಪಿ ಮುನ್ನಡೆ, ಕಾಂಗ್ರೆಸ್ ಹಿನ್ನಡೆ
LIVE

Published : 8 ಅಕ್ಟೋಬರ್ 2024, 1:45 IST
Last Updated : 8 ಅಕ್ಟೋಬರ್ 2024, 4:43 IST
ಫಾಲೋ ಮಾಡಿ
ಪ್ರಮುಖ ಘಟನೆಗಳು
01:4408 Oct 2024

ಹರಿಯಾಣ, ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯ ಮತ ಎಣಿಕೆ ಇಂದು ಬೆಳಿಗ್ಗೆ 8ಕ್ಕೆ ಆರಂಭವಾಗಿದೆ. ಇಲ್ಲಿ ಹೊರಹೊಮ್ಮುವ ಫಲಿತಾಂಶವು ಮುಂಬರುವ ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ ವಿಧಾನಸಭಾ ಚುನಾವಣೆಗಳಿಗೆ ದಿಕ್ಸೂಚಿಯಾಗುವ ಸಾಧ್ಯತೆ ಇದೆ. 

04:4308 Oct 2024

ಹರಿಯಾಣ: ಚುನಾವಣಾ ಆಯೋಗದ ಈಗಿನ ಟ್ರೆಂಡ್ ಪ್ರಕಾರ ಬಿಜೆಪಿ 43, ಕಾಂಗ್ರೆಸ್ 34 ಸ್ಥಾನಗಳಲ್ಲಿ ಮುನ್ನಡೆ

04:3908 Oct 2024

ಹರಿಯಾಣದಲ್ಲಿ ಕಾಂಗ್ರೆಸ್ ಹಿಂದಿಕ್ಕಿದ ಬಿಜೆಪಿಗೆ ಮುನ್ನಡೆ...

ಮತ ಎಣಿಕೆ ಕೇಂದ್ರಕ್ಕೆ ಹೋಗುತ್ತಿದ್ದೇನೆ, ಆಮೇಲೆ ಪ್ರತಿಕ್ರಿಯಿಸುತ್ತೇನೆ: ಕಾಂಗ್ರೆಸ್ ನಾಯಕ ಭೂಪಿಂದರ್ ಸಿಂಗ್ ಹೂಡಾ

04:3508 Oct 2024

ಹರಿಯಾಣದಲ್ಲಿ ಬಿಜೆಪಿ-ಕಾಂಗ್ರೆಸ್ ನಿಕಟ ಪೈಪೋಟಿ

ಹರಿಯಾಣ: (ಒಟ್ಟು 90, ಮ್ಯಾಜಿಕ್ ಸಂಖ್ಯೆ 46)

ಕಾಂಗ್ರೆಸ್+: 36

ಬಿಜೆಪಿ: 38

ಐಎನ್‌ಎಲ್‌ಡಿ+: 1

ಬಿಎಸ್‌ಪಿ: 1

ಐಎನ್‌ಡಿ: 3

ಒಟ್ಟು: 79/90

(ಮಾಹಿತಿ ಕೃಪೆ: ಚುನಾವಣಾ ಆಯೋಗ)

04:2808 Oct 2024

ಜಮ್ಮು-ಕಾಶ್ಮೀರದಲ್ಲಿ ಎನ್‌ಸಿ-ಕಾಂಗ್ರೆಸ್ ಮೈತ್ರಿ 46 ಸ್ಥಾನಗಳಲ್ಲಿ ಮುನ್ನಡೆ

ಜಮ್ಮು-ಕಾಶ್ಮೀರದಲ್ಲಿ ಮತ ಎಣಿಕೆ ಪ್ರಗತಿಯಲ್ಲಿದ್ದು, ನ್ಯಾಷನಲ್ ಕಾನ್ಫರೆನ್ಸ್ ಹಾಗೂ ಕಾಂಗ್ರೆಸ್ ಮೈತ್ರಿ 46 ಸ್ಥಾನಗಳಲ್ಲಿ ಮುನ್ನಡೆ ಗಳಿಸಿವೆ. ಈ ಪೈಕಿ ಎನ್‌ಸಿ 39 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಜಮ್ಮು-ಕಾಶ್ಮೀರ ಬಿಜೆಪಿ ಘಟಕದ ಅಧ್ಯಕ್ಷ ರವಿಂದರ್ ರೈನಾ, 2,797 ಮತಗಳ ಹಿನ್ನಡೆಯಲ್ಲಿದ್ದಾರೆ.

04:2408 Oct 2024

ಹರಿಯಾಣ: ಜುಲಾನಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಕುಸ್ತಿಪಟು ವಿನೇಶ್ ಫೋಗಟ್ 214 ಮತಗಳ ಮುನ್ನಡೆಯಲ್ಲಿದ್ದಾರೆ. 

04:2108 Oct 2024

ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ 5,082 ಮತಗಳ ಅಂತರದ ಮುನ್ನಡೆಯಲ್ಲಿದ್ದಾರೆ. 

04:1408 Oct 2024

ತಾಜಾ ಮಾಹಿತಿಯ ಪ್ರಕಾರ ಹರಿಯಾಣದಲ್ಲಿ ಬಿಜೆಪಿ 44 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಮತ್ತೊಂದೆಡೆ ಈವರೆಗೆ ಮುನ್ನಡೆ ಕಾಯ್ದುಕೊಂಡಿದ್ದ ಕಾಂಗ್ರೆಸ್ ಹಿನ್ನಡೆ ಅನುಭವಿಸಿದೆ.

04:1108 Oct 2024

ಜಮ್ಮು ಕಾಶ್ಮೀರ: ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಎರಡೂ ಕ್ಷೇತ್ರಗಳಲ್ಲೂ ಮುನ್ನಡೆ ಗಳಿಸಿದ್ದಾರೆ. 

04:0708 Oct 2024

ಶ್ರೀನಗರದಲ್ಲಿ ಮತ ಎಣಿಕೆ ಪ್ರಗತಿಯಲ್ಲಿದೆ. 

04:0108 Oct 2024

ಚುನಾವಣಾ ಆಯೋಗ ಆರಂಭಿಕ ಟ್ರೆಂಡ್

ಚುನಾವಣಾ ಆಯೋಗದ ಪ್ರಕಾರ ಜಮ್ಮು-ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ 25 ಹಾಗೂ ಕಾಂಗ್ರೆಸ್ 6 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಮತ್ತೊಂದೆಡೆ ಬಿಜಿಪಿ 18 ಸ್ಥಾನಗಳಲ್ಲಿ ಮುನ್ನಡೆ ಗಳಿಸಿವೆ.

ADVERTISEMENT
ADVERTISEMENT