ನವದೆಹಲಿ: ವಿಶೇಷ ನಿರ್ದೇಶಕ ರಾಕೇಶ್ ಅಸ್ತಾನಾ ಮತ್ತು ಮೂವರು ಹಿರಿಯ ಅಧಿಕಾರಿಗಳನ್ನು ಸಿಬಿಐನಿಂದ ತಕ್ಷಣದಿಂದಲೇ ಹೊರ ಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಸಿಬಿಐಗೆ ಹೊಸ ಮುಖ್ಯಸ್ಥರ ನೇಮಕಕ್ಕೆ ಮುಂಚೆ ಸಂಸ್ಥೆಯೊಳಗಿನ ಸ್ಥಿತಿಯನ್ನು ಸರಿಪಡಿಸುವುದು ಇದರ ಉದ್ದೇಶ ಎನ್ನಲಾಗಿದೆ. ಸಿಬಿಐ ನಿರ್ದೇಶಕರ ಆಯ್ಕೆ ಸಮಿತಿ ಸಭೆ ಇದೇ 24ರಂದು ನಡೆಯಲಿದೆ.

ಪ್ರಧಾನಿ ನೇತೃತ್ವದ ಆಯ್ಕೆ ಸಮಿತಿಯು ಸಿಬಿಐ ಮುಖ್ಯಸ್ಥ ಅಲೋಕ್ ವರ್ಮಾ ಅವರನ್ನು ವರ್ಗಾಯಿಸಿದ ಕೆಲವೇ ದಿನಗಳಲ್ಲಿ ಅಸ್ತಾನಾ ಅವರನ್ನೂ ಎತ್ತಂಗಡಿ ಮಾಡಲಾಗಿದೆ.

ಈ ಇಬ್ಬರ ಕಚ್ಚಾಟ ಬೀದಿಗೆ ಬಂದ ಕಾರಣದಿಂದ ಕೇಂದ್ರ ಸರ್ಕಾರ ಮತ್ತು ಪ್ರತಿಷ್ಠಿತ ತನಿಖಾ ಸಂಸ್ಥೆ ಸಿಬಿಐ ಮುಜುಗರ ಅನುಭವಿಸುವಂತಾಗಿತ್ತು.

ಒಳಜಗಳದ ಕಾರಣದಿಂದಾಗಿ ಅಸ್ತಾನಾ ಅವರನ್ನು ಕಳೆದ ವರ್ಷ ಅಕ್ಟೋಬರ್ನಲ್ಲಿ ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿತ್ತು.

ಅಸ್ತಾನಾ ಅವರು ಸಿಬಿಐಯ ಎರಡನೇ ಅತ್ಯುನ್ನತ ಅಧಿಕಾರಿಯಾಗಿದ್ದರು. ಜಂಟಿ ನಿರ್ದೇಶಕ ಅರುಣ್ ಕುಮಾರ್ ಶರ್ಮಾ, ಉಪಮಹಾನಿರೀಕ್ಷಕ ಮನೀಶ್ ಕುಮಾರ್ ಸಿನ್ಹಾ ಮತ್ತು ಎಸ್ಪಿ ಜಯಂತ್ ಜೆ. ನೈಕ್ನವರೆ ಅವರನ್ನು ಕೂಡ ಸಿಬಿಐನಿಂದ ಹೊರಗೆ ಕಳುಹಿಸಲಾಗಿದೆ.

ವರ್ಮಾ ಮತ್ತು ಅಸ್ತಾನಾ ಅವರು ಪರಸ್ಪರರ ವಿರುದ್ಧ ಭ್ರಷ್ಟಾಚಾರದ ಗಂಭೀರ ಆರೋಪಗಳನ್ನು ಮಾಡಿದ್ದರು. ವರ್ಮಾ ಅವರು ಸಿಬಿಐ ಮುಖ್ಯಸ್ಥರಾಗಿದ್ದ ಅವಧಿಯಲ್ಲಿ ಅಸ್ತಾನಾ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ಬಳಿಕ, ವರ್ಮಾ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿ ಎಂ. ನಾಗೇಶ್ವರ ರಾವ್ ಅವರನ್ನು ಸಿಬಿಐ ಮಧ್ಯಂತರ ಮುಖ್ಯಸ್ಥರಾಗಿ ಕೇಂದ್ರ ಸರ್ಕಾರ ನೇಮಿಸಿತ್ತು.

ಅಸ್ತಾನಾ ವಿರುದ್ಧದ ಪ್ರಕರಣದ ತನಿಖೆ ನಡೆಸುತ್ತಿದ್ದ ಸಿನ್ಹಾ ಅವರನ್ನು ರಾವ್ ಅವರು ವರ್ಗಾಯಿಸಿದ್ದರು. ಸುಪ್ರೀಂ ಕೋರ್ಟ್ ಆದೇಶದಂತೆ ಸಿಬಿಐ ಮುಖ್ಯಸ್ಥ ಹುದ್ದೆಗೆ ಕೆಲವೇ ದಿನಗಳ ಮಟ್ಟಿಗೆ ಮರಳಿದ್ದ ವರ್ಮಾ ಅವರು ಸಿನ್ಹಾ ವರ್ಗಾವಣೆಯನ್ನು ರದ್ದುಪಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.