ಪ್ರಯಾಗರಾಜ: ಉಮೇಶ್ ಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಯಾಂಗ್‌ಸ್ಟರ್ ಕಮ್ ರಾಜಕಾರಣಿ ಅತೀಕ್ ಅಹ್ಮದ್ ಪರ ವಕೀಲ ವಿಜಯ್ ಮಿಶ್ರಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.

'ಇಂದು ಧೂಮಂಗಂಜ್ ಪೊಲೀಸ್ ಠಾಣೆಯ ಅಧಿಕಾರಿಗಳು ಲಖನೌದ ಹೊಟೇಲ್ ಒಂದರ ಬಳಿ ವಿಜಯ್ ಮಿಶ್ರಾ ಅವರನ್ನು ಬಂಧಿಸಿದ್ದಾರೆ' ಎಂದು ಉಪ ಪೊಲೀಸ್ ಆಯುಕ್ತ (ನಗರ) ದೀಪಕ್ ಭುಕರ್ ಹೇಳಿದ್ದಾರೆ.

'ಕ್ರಿಮಿನಲ್ ಕಾನೂನು (ತಿದ್ದುಪಡಿ) ಕಾಯ್ದೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ, ಸ್ಫೋಟಕ ಕಾಯ್ದೆ ಸೇರಿದಂತೆ ಹಲವು ಪ್ರಕರಣಗಳು ಅವರ ವಿರುದ್ಧ ದಾಖಲಾಗಿದ್ದು, ವಿಚಾರಣೆ ನಡೆಯುತ್ತಿದೆ' ಎಂದು ಹೇಳಿದರು.

2005ರಲ್ಲಿ ನಡೆದ ಬಿಎಸ್‌ಪಿ ಶಾಸಕ ರಾಜು ಪಾಲ್ ಹತ್ಯೆ ಪ್ರಕರಣದ ಪ್ರಮುಖ ಸಾಕ್ಷಿ ಉಮೇಶ್ ಪಾಲ್ ಮತ್ತು ಆತನ ಇಬ್ಬರು ಭದ್ರತಾ ಸಿಬ್ಬಂದಿಯನ್ನು ಫೆಬ್ರವರಿ 24ರಂದು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ಹತ್ಯೆಯ ಪ್ರಮುಖ ಆರೋಪಿಗಳಾದ ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ಅಹ್ಮದ್ ಅವರನ್ನು ಇತ್ತೀಚೆಗೆ ವೈದ್ಯಕೀಯ ಕಾಲೇಜವೊಂದರ ಬಳಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

ಉಮೇಶ್ ಪಾಲ್ ಹತ್ಯೆ ಪ್ರಕರಣದ ಮತ್ತೋರ್ವ ಆರೋಪಿ ಅತೀಕ್ ಅಹ್ಮದ್ ಪತ್ನಿ ಶೈಸ್ತಾ ಪರ್ವೀನ್ ಇನ್ನೂ ತಲೆಮರೆಸಿಕೊಂಡಿದ್ದಾಳೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.