ನಾಗ್ಪುರ: ನಾಗ್ಪುರದಲ್ಲಿ ಎನ್ಸಿಪಿ (ಎಸ್ಪಿ) ನಾಯಕ, ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ನಾಲ್ವರು ಅಪರಿಚಿತ ವ್ಯಕ್ತಿಗಳ ಮೇಲೆ ಕೊಲೆ ಯತ್ನದ ಆರೋಪದಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಅನಿಲ್ ದೇಶಮುಖ್ ಅವರು ಸಂಚರಿಸುತ್ತಿದ್ದ ಕಾರಿನ ಮೇಲೆ ಸೋಮವಾರ ರಾತ್ರಿ 8 ಗಂಟೆ ಸುಮಾರಿಗೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದೇಶಮುಖ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಪ್ರಚಾರದ ಕೊನೆಯ ದಿನ ಈ ಘಟನೆ ನಡೆದಿದೆ. ಈ ಸಂಬಂಧ ಉನ್ನತ ಮಟ್ಟದ ತನಿಖೆಗೆ ಎನ್ಸಿಪಿ (ಎಸ್ಪಿ) ಒತ್ತಾಯಿಸಿದೆ.

ನಾಗ್ಪುರ ಜಿಲ್ಲೆಯ ನಾರ್ಖೆಡ್ ಗ್ರಾಮದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ ಬಳಿಕ ದೇಶಮುಖ್ ಅವರು ಕಟೋಲ್ಗೆ ಹಿಂತಿರುಗುತ್ತಿದ್ದರು. ಈ ವೇಳೆ ಜಲಾಲ್ಖೇಡಾ ರಸ್ತೆಯ ಬೆಲ್ಪತ್ರ್ ಬಳಿ ದುಷ್ಕರ್ಮಿಗಳು ಅವರ ಕಾರಿಗೆ ಕಲ್ಲು ತೂರಾಟ ನಡೆಸಿದ್ದಾರೆ.

'ಘಟನಾ ಸ್ಥಳಕ್ಕೆ ವಿಧಿ ವಿಜ್ಞಾನ ತಂಡ ಭೇಟಿ ನೀಡಿ, ಸಾಕ್ಷ್ಯಗಳನ್ನು ಸಂಗ್ರಹಿಸಿದೆ' ಎಂದು ನಾಗ್ಪುರ ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಹರ್ಷ್ ಪೊದ್ದಾರ್ ತಿಳಿಸಿದ್ದಾರೆ.
.ಮಹಾರಾಷ್ಟ್ರ ಚುನಾವಣೆ ಕೋಟ್ಯಧಿಪತಿಗಳು–ಬಡವರ ನಡುವಿನ ಯುದ್ಧವಾಗಿದೆ: ರಾಹುಲ್ ಗಾಂಧಿ.ಮಹಾರಾಷ್ಟ್ರ: ಚುನಾವಣಾ ರ್ಯಾಲಿ ರದ್ದುಗೊಳಿಸಿ ದೆಹಲಿಗೆ ತೆರಳಿದ ಅಮಿತ್ ಶಾ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.