ನವದೆಹಲಿ : ಅಮೆರಿಕದ ವಿದೇಶಾಂಗ ವ್ಯವಹಾರ ಇಲಾಖೆಯ ವಾರ್ಷಿಕ ವರದಿಯಲ್ಲಿ ‘ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯ’ ಕುರಿತು ಮಾಡಿರುವ ಉಲ್ಲೇಖಗಳ ಬಗ್ಗೆ ಭಾರತವು ಆಕ್ಷೇಪ ವ್ಯಕ್ತಪಡಿಸಿದೆ.

‘ದೇಶದಲ್ಲಿ ಅಲ್ಪಸಂಖ್ಯಾತ ಮುಸಲ್ಮಾನರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳನ್ನು ತಡೆಯಲು ಕೇಂದ್ರ ಸರ್ಕಾರ ವಿಫಲವಾಗಿದೆ’ ಎಂದು ವರದಿಯಲ್ಲಿ ಹೇಳಲಾಗಿದೆ.

ವರದಿಯು ಮುಖ್ಯವಾಗಿ 2018ರಲ್ಲಿ ಮುಸಲ್ಮಾನರ ಮೇಲೆ ನಡೆದ ದೌರ್ಜನ್ಯ ಪ್ರಕರಣಗಳನ್ನು ಉಲ್ಲೇಖಿಸಿದೆ. ‘ಪ್ರಧಾನಿ ನರೇಂದ್ರ ಮೋದಿ ಅವರ ಪಕ್ಷವಾದ ಬಿಜೆಪಿಯ ಕೆಲ ಮುಖಂಡರು ಕಳೆದ ವರ್ಷ ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ಭಾಷಣ ಮಾಡಿದ್ದರು. ಹಿಂದೂಗಳ ಆಕ್ರೋಶಿತ ಗುಂಪು ಅಲ್ಪಸಂಖ್ಯಾತ ಸಮುದಾಯ, ಮುಖ್ಯವಾಗಿ ಮುಸಲ್ಮಾನರ ಮೇಲೆ ದೌರ್ಜನ್ಯ ಎಸಗಿದೆ. ಮಾಂಸಕ್ಕಾಗಿಮುಸಲ್ಮಾನರು ಗೋಹತ್ಯೆ ನಡೆಸುತ್ತಿದ್ದಾರೆ ಎಂಬ ವದಂತಿಗಳ ಕಾರಣದಿಂದ ಬಹುತೇಕ ಇಡೀ ವರ್ಷ ಇಂಥ ದೌರ್ಜನ್ಯ ಪ್ರಕರಣಗಳು ನಡೆದವು’ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ವರದಿಗೆ ಆಕ್ಷೇಪ ವ್ಯಕ್ತಪಡಿಸಿ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಭಾನುವಾರ ಪತ್ರ ಬರೆದಿದೆ.

‘ಭಾರತ ತನ್ನ ಜಾತ್ಯತೀತ ಸಿದ್ಧಾಂತಕ್ಕೆ ಬದ್ಧವಾಗಿದೆ. ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ, ಬಹುಸಂಸ್ಕೃತಿಯ ಸಮಾಜವಾಗಿ, ದೀರ್ಘ ಕಾಲದಿಂದ ‘ಸಹಿಷ್ಣುತೆ’ ಮತ್ತು ಎಲ್ಲರನ್ನೂ ಒಳಗೊಳ್ಳುವ ರಾಷ್ಟ್ರವಾಗಿರುವ ಬಗ್ಗೆ ಭಾರತಕ್ಕೆ ಆ ಬಗ್ಗೆ ಹೆಮ್ಮೆ ಇದೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಹೇಳಿದ್ದಾರೆ.

‘ಭಾರತದ ಸಂವಿಧಾನ ಎಲ್ಲ ನಾಗರಿಕರಿಗೆ ಮೂಲಭೂತ ಹಕ್ಕುಗಳು, ಧಾರ್ಮಿಕ ಸ್ವಾತಂತ್ರ್ಯವನ್ನು ನೀಡುತ್ತದೆ. ದೇಶದ 130 ಕೋಟಿ ಜನರಲ್ಲಿ ಮುಸಲ್ಮಾನರ ಪ್ರಮಾಣ ಶೇ 14ರಷ್ಟಿದೆ’ ಎಂದು ಕುಮಾರ್ ಪ್ರತಿಪಾದಿಸಿದ್ದಾರೆ.

ಪಾಂಪಿಯೊ ಅವರು ಮಂಗಳವಾರ ನವದೆಹಲಿಗೆ ಭೇಟಿ ನೀಡುವ ನಿರೀಕ್ಷೆಯಿದೆ. ಮುಂದಿನ ವಾರ ಜಪಾನ್ನಲ್ಲಿ ನಡೆಯುವ ಜಿ20 ಶೃಂಗಸಭೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಮಾತುಕತೆಗೆ ವೇದಿಕೆ ಸಜ್ಜುಗೊಳಿಸುವುದು ಈ ಭೇಟಿಯ ಉದ್ದೇಶ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.