ಬೆಂಗಳೂರು: ಪ್ರವಾದಿ ಮಹಮ್ಮದ್ರ ಬಗ್ಗೆ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರು ನೀಡಿದ್ದಾರೆ ಎನ್ನಲಾದ ಹೇಳಿಕೆ ದೇಶ ವಿದೇಶಗಳಲ್ಲಿ ವ್ಯಾಪಕ ವಿವಾದ ಸೃಷ್ಟಿಸಿದೆ.

ಅನೇಕ ಮುಸ್ಲಿಂ ರಾಷ್ಟ್ರಗಳು ಈ ಬಗ್ಗೆ ಖಂಡನೆ ವ್ಯಕ್ತಪಡಿಸಿದ್ದರೆ, ನೂಪುರ್ ಶರ್ಮಾ ಬಂಧಿಸಬೇಕು ಎಂದು ಭಾರತದಲ್ಲಿ ಮುಸ್ಲಿಂ ಸಮುದಾಯದವರು ಅಲ್ಲಿಲ್ಲಿ ತೀವ್ರ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಏತನ್ಮಧ್ಯೆ ಬಾಂಗ್ಲಾದೇಶದಿಂದ ಗಡಿಪಾರಾಗಿರುವ ಲೇಖಕಿ ತಸ್ಲಿಮಾ ನಸ್ರೀನ್ ಅವರು ಟ್ವೀಟ್ ಮಾಡಿ ಈ ವಿಚಾರದಲ್ಲಿ ಮುಸ್ಲಿಂ ಸಮುದಾಯದ ನಡೆಯನ್ನು ಖಂಡಿಸಿದ್ದಾರೆ.

'ಪ್ರವಾದಿ ಮಹಮ್ಮದ್ ಇಂದು ಬದುಕಿದ್ದರೆ, ಈ ಜಗತ್ತಿನಲ್ಲಿ ಮುಸ್ಲಿಂ ಮತಾಂಧರ ಹುಚ್ಚುತನವನ್ನು ನೋಡಿ ಬೆಚ್ಚಿ ಬೀಳುತ್ತಿದ್ದರು' ಎಂದುತಸ್ಲಿಮಾ ನಸ್ರೀನ್ ಟ್ವೀಟ್ ಮಾಡಿದ್ದಾರೆ.

ಇದಕ್ಕೂ ಮುನ್ನ ಟ್ವೀಟ್ ಮಾಡಿದ್ದ ಅವರು ‘ವಿಮರ್ಶೆಗೆ ಯಾರೂ ಅತೀತರಲ್ಲ. ಅದು ದೇವರಾಗಿರಬಹುದು, ಸಂತನಾಗಿರಬಹುದು, ಪ್ರವಾದಿಯೇ ಆಗಿರಬಹುದು’ ಎಂದು ಹೇಳಿದ್ದರು.

ತಸ್ಲಿಮಾ ಅವರು ಲಜ್ಜಾ ಎಂಬ ಪುಸ್ತಕ ಬರೆದು ಮುಸ್ಲಿಂ ಮೂಲಭೂತವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಅವರನ್ನು ಬಾಂಗ್ಲಾದೇಶ 1994 ರಲ್ಲಿ ಗಡಿಪಾರು ಮಾಡಿತ್ತು. ಸದ್ಯ ಎರಡು ದಶಕಗಳಿಗೂ ಹೆಚ್ಚು ಕಾಲ ಅವರು ಬಾಂಗ್ಲಾದೇಶದ ಹೊರಗೆ ಜೀವನ ಸಾಗಿಸುತ್ತಿದ್ದಾರೆ. ಅವರು ಸ್ವಿಡನ್ ಪೌರತ್ವ ಹೊಂದಿದ್ದು, ಅಮೆರಿಕ ಹಾಗೂ ಯೂರೋಪ್ನಲ್ಲಿ ವಾಸಿಸುತ್ತಿರುತ್ತಾರೆ.

ಇನ್ನೊಂದೆಡೆ ನೂಪುರ್ ಶರ್ಮಾ ಅವರ ವಿರುದ್ಧ ದೇಶದ ಹಲವೆಡೆ ಭಾರೀ ಪ್ರತಿಭಟನೆಗಳನ್ನು ಮುಸ್ಲಿಂ ಸಮುದಾಯದವರು ನಡೆಸುತ್ತಿದ್ದಾರೆ. ಈ ವೇಳೆ ಉತ್ತರ ಪ್ರದೇಶದ ಪ್ರಯಾಗರಾಜ್ ಹಾಗೂ ರಾಂಚಿಯಲ್ಲಿ ವ್ಯಾಪಕ ಹಿಂಸಾಚಾರಗಳು ನಡೆದಿವೆ. ಶರ್ಮಾ ವಿರುದ್ಧ ಕೆಲವರು ಜೀವ ಬೆದರಿಕೆ ಹಾಕಿದ್ದರೆ, ಇನ್ನೂ ಕೆಲವರು ಅನೇಕ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸಿದ್ದಾರೆ.

ವಿಡಿಯೊದಲ್ಲಿ ನೂಪುರ್ ಶರ್ಮಾ ತಲೆ ಕತ್ತರಿಸಿದ್ದ ಕಾಶ್ಮೀರದ ಯುಟ್ಯೂಬರ್ ಕ್ಷಮೆಯಾಚನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.