ಮುಂಬೈ: ಇಲ್ಲಿನ ಛತ್ರಪತಿ ಶಿವಾಜಿ ಮಹಾರಾಜ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು (ಸಿಎಸ್ಎಂಐಎ) 4 ಕೋಟಿಗೂ ಹೆಚ್ಚು ಪ್ರಯಾಣಿಕರಿಗೆ ಸೇವೆ ಕಲ್ಪಿಸುವ ಮೂಲಕ ಏಷ್ಯಾ ಪೆಸಿಫಿಕ್ ಪ್ರಾಂತ್ಯದಲ್ಲೇ ಅತ್ಯುತ್ತಮವಾದ ವಿಮಾನ ನಿಲ್ದಾಣ ಎಂಬ ಶ್ರೇಯಕ್ಕೆ ಭಾಜನವಾಗಿದೆ.

ಈ ಮೂಲಕ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳ ಕೌನ್ಸಿಲ್ನ ವಿಮಾನ ನಿಲ್ದಾಣ ಸೇವೆಯ ಗುಣಮಟ್ಟ (ಏರ್ಪೋರ್ಟ್ ಸರ್ವಿಸ್ ಕ್ವಾಲಿಟಿ) ಪ್ರಶಸ್ತಿಗೆ ಭಾಜನವಾಗಿದೆ.

ಛತ್ರಪತಿ ಶಿವಾಜಿ ಮಹಾರಾಜ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ಸತತ ಏಳನೇ ವರ್ಷವೂ ಪ್ರತಿಷ್ಠಿತವಾದ ಅತ್ಯುತ್ತಮ ವಿಮಾನ ನಿಲ್ದಾಣ ಎಂಬ ಹೆಗ್ಗಳಿಗೆ ಪಾತ್ರವಾಗಿದೆ ಎಂದು ಸಿಎಸ್ಎಂಐಎ ಬುಧವಾರ ಹೇಳಿಕೆ ಬಿಡುಗಡೆ ಮಾಡಿದೆ.

ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳ ಕೌನ್ಸಿಲ್ನ (ಎಸಿಐ) ಪ್ರಧಾನ ನಿರ್ದೇಶಕ ಲೂಯಿಸ್ ಫಿರಿಪ್ ಡಿ ಒಲಿವೀರಾ ಅವರು, ‘ಈ ಪ್ರಶಸ್ತಿಯು ವಿಮಾನ ನಿಲ್ದಾಣದ ಇಡೀ ತಂಡದ ಹೊಸ ಪರಿಕಲ್ಪನೆ ಮತ್ತು ಸಮರ್ಪಣೆ ಭಾವವನ್ನು ಗುರುತಿಸಲಿದೆ. ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಭಿನಂದನೆಗಳು’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.