ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ‘ಮುಖ್ಯ ಯಜಮಾನ’ (ಪುರೋಹಿತರು ಇವರ ಪರವಾಗಿ ವಿಧಿ ವಿಧಾನಗಳನ್ನು ನಡೆಸುತ್ತಾರೆ) ಆಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ದೇವಸ್ಥಾನ ಸಂಕೀರ್ಣವನ್ನು ಪೂರ್ವ ದಿಕ್ಕಿನ ಬಾಗಿಲಿನಿಂದ ಪ್ರವೇಶಿಸಲಿದ್ದಾರೆ ಎಂದು ಸಮಾರಂಭದ ಸಿದ್ಧತೆಯಲ್ಲಿ ತೊಡಗಿಸಿಕೊಂಡಿರುವ ಸ್ವಾಮೀಜಿಯೊಬ್ಬರು ತಿಳಿಸಿದರು. ಮಂದಿರ ನಿರ್ಮಾಣದ ಉಸ್ತುವಾರಿ ಹೊತ್ತಿರುವ ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸದಸ್ಯರನ್ನು ಮೋದಿ ಅವರು ಭೇಟಿ ಮಾಡಲಿದ್ದಾರೆ. ಪ್ರಧಾನಿಯವರು ಹತ್ತು ಬಗೆಯ ದಾನ ಕಾರ್ಯ ನಡೆಸಲಿದ್ದಾರೆ. ಅದಾದ ಬಳಿಕ ಅವರು ಗರ್ಭ ಗೃಹ ಪ್ರವೇಶಿಸಲಿದ್ದಾರೆ ಎಂದು ಸ್ವಾಮೀಜಿ ತಿಳಿಸಿದರು.
14 ಯಜಮಾನರು
ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯ ಕಾರ್ಯಕ್ರಮದಲ್ಲಿ ದೇಶದ ವಿವಿಧ ಭಾಗಗಳ 14 ದಂಪತಿ ‘ಯಜಮಾನ’ರಾಗಿ ಪಾಲ್ಗೊಳ್ಳಲಿದ್ದಾರೆ. ಕರ್ನಾಟಕದ ಲಿಂಗರಾಜ ಬಸವರಾಜ ಅವರು ಯಜಮಾನರಾಗಿ ಪತ್ನಿಯೊಂದಿಗೆ ಭಾಗಿಯಾ ಗಲಿದ್ದಾರೆ.
ಕೋಮುಸೌಹಾರ್ದ ಹಾಗೂ ಭ್ರಾತೃತ್ವ ಕಾಪಾಡಲು ಎಲ್ಲರೂ ತಮ್ಮದೇ ಆದ ಬಗೆಯಲ್ಲಿ ಪ್ರಾರ್ಥನೆ ಸಲ್ಲಿಸಬೇಕು. ಎಲ್ಲ ಮತಧರ್ಮಗಳ ಜನರೂ ಪ್ರಾಣ ಪ್ರತಿಷ್ಠಾಪನೆಯಲ್ಲಿ ಭಾಗಿಯಾಗಬೇಕು.