ನವದೆಹಲಿ: ಬಿಜೆಪಿ ಮುಖಂಡರಾದ ಎಲ್.ಕೆ.ಅಡ್ವಾಣಿ ಮತ್ತು ಮುರಳಿ ಮನೋಹರ ಜೋಷಿ ಅವರನ್ನು ದೂರವಾಣಿ ಮೂಲಕ ಭೂಮಿ ಪೂಜೆಗೆ ಆಹ್ವಾನಿಸಲು ನಿರ್ಧರಿಸಲಾಗಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಮೂಲಗಳಿಂದ ಈ ವಿಷಯ ತಿಳಿದು ಬಂದಿರುವುದಾಗಿ ಎನ್ಡಿಟಿವಿ ಶನಿವಾರ ವರದಿ ಮಾಡಿದೆ.

ರಾಮ ಮಂದಿರದ ಭೂಮಿ ಪೂಜೆ ಕಾರ್ಯಕ್ರಮವು ಇದೇ ತಿಂಗಳ 5ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿಗದಿಯಾಗಿದೆ. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಕೇಂದ್ರದ ಮಾಜಿ ಸಚಿವೆ ಉಮಾಭಾರತಿ ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರಿಗೂ ಶನಿವಾರ ಆಹ್ವಾನ ಪತ್ರಿಕೆ ಕಳುಹಿಸಲಾಗಿದೆ ಎಂದು ಹೇಳಲಾಗಿದೆ. ಇವರು ಬಾಬರಿ ಮಸೀದಿ ಧ್ವಂಸ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದಾರೆ. ಅಡ್ವಾಣಿ ಮತ್ತು ಜೋಷಿ ಅವರೂ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದು, ಅವರನ್ನು ಭೂಮಿ ಪೂಜೆಗೆ ಆಹ್ವಾನಿಲ್ಲ ಎನ್ನಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.