ನವದೆಹಲಿ: ನಿಮ್ಹಾನ್ಸ್ನ ಮಾಜಿ ನಿರ್ದೇಶಕರಾದ ಡಾ.ಬಿ.ಎನ್.ಗಂಗಾಧರ್ ಅವರನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗದ (ಎನ್ಎಂಸಿ) ಅಧ್ಯಕ್ಷರನ್ನಾಗಿ ಕೇಂದ್ರ ಸರ್ಕಾರ ನೇಮಕ ಮಾಡಿದೆ.

ಪ್ರಸ್ತುತ, ಡಾ.ಗಂಗಾಧರ್ ಅವರು ವೈದ್ಯಕೀಯ ಮೌಲ್ಯಮಾಪನ ಮತ್ತು ರೇಟಿಂಗ್ ಮಂಡಳಿಯ ಅಧ್ಯಕ್ಷರಾಗಿದ್ದಾರೆ.

ನೇಮಕಾತಿ ಕುರಿತ ಸಂಪುಟ ಸಮಿತಿಯು (ಎಸಿಸಿ)ಯು ಎನ್ಎಂಸಿ ಸೇರಿದಂತೆ ಇತರ ಸ್ವಾಯತ್ತ ಸಂಸ್ಥೆಗಳ ವಿವಿಧ ಹುದ್ದೆಗಳಿಗೆ ನೇಮಕ ಮಾಡಿದೆ.

ಆಯೋಗದ ಅಧ್ಯಕ್ಷರಾಗಿದ್ದ ಡಾ.ಎಸ್.ಸಿ.ಶರ್ಮಾ ಅವರ ಅಧಿಕಾರಾವಧಿ ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಮುಕ್ತಾಯಗೊಂಡಿತ್ತು.

ಗಂಗಾಧರ್ ಅವರ ಅಧಿಕಾರಾವಧಿಯು ನಾಲ್ಕು ವರ್ಷ ಅಥವಾ ಅವರಿಗೆ 70 ವರ್ಷ ತುಂಬುವವರೆಗೆ, ಈ ಪೈಕಿ ಯಾವುದು ಮೊದಲೋ ಅಲ್ಲಿಯವರೆಗೆ ಇರಲಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ತಿರುವನಂತಪುರದ ಶ್ರೀ ಚಿತ್ರ ತಿರುನಾಳ ವೈದ್ಯಕೀಯ ವಿಜ್ಞಾನಗಳು ಮತ್ತು ತಂತ್ರಜ್ಞಾನ ಸಂಸ್ಥೆ ನಿರ್ದೇಶಕ ಡಾ.ಸಂಜಯ್ ಬಿಹಾರಿ ಅವರನ್ನು ವೈದ್ಯಕೀಯ ಮೌಲ್ಯಮಾಪನ ಮತ್ತು ರೇಟಿಂಗ್ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಮುಂಬೈನ ಅಪೊಲೊ ಆಸ್ಪತ್ರೆಯ ಕ್ಯಾನ್ಸರ್ ಚಿಕಿತ್ಸಾ ವಿಭಾಗದ ನಿರ್ದೇಶಕ ಡಾ.ಅನಿಲ್ ಡಿಕ್ರೂಜ್ ಅವರನ್ನು ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮಂಡಳಿ ಪೂರ್ಣಾವಧಿ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಟಾಟಾ ಮೆಮೋರಿಯಲ್ ಸೆಂಟರ್ನ ವಿಶ್ರಾಂತ ಪ್ರಾಧ್ಯಾಪಕ ಡಾ.ರಾಜೇಂದ್ರ ಅಚ್ಯುತ ಬಡ್ವೆ ಅವರನ್ನು ಮಂಡಳಿಯ ಅರೆಕಾಲಿಕ ಸದಸ್ಯರನ್ನಾಗಿ ಎರಡು ವರ್ಷಗಳ ಅವಧಿಗೆ ಇಲ್ಲವೇ ಅವರಿಗೆ 70 ವರ್ಷ ತುಂಬುವವರೆಗೆ ಅಥವಾ ಮುಂದಿನ ಆದೇಶದ ವರೆಗೆ ನೇಮಕ ಮಾಡಲಾಗಿದೆ ಎಂದೂ ಸಚಿವಾಲಯ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.