ಮಹಾರಾಷ್ಟ್ರ: ಕಳೆದವಾರವಷ್ಟೇ ಕಾಂಗ್ರೆಸ್ ತೊರೆದಿದ್ದ ಹಿರಿಯ ನಾಯಕ ಬಾಬಾ ಸಿದ್ದಿಕಿ ಅವರು, ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷಕ್ಕೆ (ಎನ್ಸಿಪಿ) ಸೇರ್ಪಡೆಯಾಗಿದ್ದಾರೆ.

ಪಕ್ಷದ ಅಧ್ಯಕ್ಷ ಹಾಗೂ ಮಹಾರಾಷ್ಟ್ರ ಉಪಮುಖ್ಯಮಂತ್ರಿಯೂ ಆದ ಅಜಿತ್ ಪವಾರ್, ಕಾರ್ಯಾಧ್ಯಕ್ಷ ಪ್ರಫುಲ್ ಪಟೇಲ್, ರಾಜ್ಯ ಘಟಕದ ಅಧ್ಯಕ್ಷ ಸುನೀಲ್ ಠಾಕ್ರೆ ಮತ್ತು ಇತರ ನಾಯಕರು ಸಿದ್ದಿಕಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.

ಸಿದ್ದಿಕಿ ಅವರು ಕಾಂಗ್ರೆಸ್ ತೊರೆದ ಸಂದರ್ಭದಲ್ಲಿ, ಹದಿಯರೆಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರಿದ್ದೆ. ಇದು 48 ವರ್ಷಗಳ ಮಹತ್ವದ ಪ್ರಯಾಣವಾಗಿದೆ. ಈ ಕ್ಷಣದಿಂದಲೇ ಜಾರಿಯಾಗುವಂತೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಕೆಲವು ವಿಷಯಗಳನ್ನು ಮಾತನಾಡದೇ ಇರುವುದು ಉತ್ತಮ. ಈ ಪಯಣದಲ್ಲಿ ಭಾಗಿಯಾದ ಎಲ್ಲರಿಗೂ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದರು.

2024ರ ಸಾರ್ವತ್ರಿಕ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್ ತೊರೆದ ಮಹಾರಾಷ್ಟ್ರದ ಎರಡನೇ ನಾಯಕ ಇವರು. ಮಿಲಿಂದ್ ದಿಯೋರಾ ಅವರು ಕಳೆದ ತಿಂಗಳಷ್ಟೇ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ ಪಕ್ಷ ಸೇರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.