ಬಹ್ರೈಚ್ (ಉತ್ತರ ಪ್ರದೇಶ): ಮೊಹರಂ ದಿನದಂದು ನಿಷೇಧಿತ ಪ್ರದೇಶಗಳಲ್ಲಿ ಧಾರ್ಮಿಕ ಮೆರವಣಿಗೆ ನಡೆಸಿರುವುದು, ಆಯುಧ ಪ್ರದರ್ಶನ ಮತ್ತು ಕೋಮು ಶಾಂತಿ ಕದಡುವ ಮೂರು ಪ್ರಕರಣಗಳಿಗೆ ಸಂಬಂಧಿಸಿದಂತೆ 15 ಮಂದಿಯನ್ನು ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಬುಧವಾರ, ಮೊಹರಂ ಆಚರಣೆಯಂದು ಮೈದಾನದ ಮೂಲಕ ಹಾದುಹೋಗದಂತೆ ತಡೆದ ಗುಂಪಿನ ಮೇಲೆ ತಾಜಿಯಾ (ಇಮಾಮ್ ಹುಸೇನ್ನರ ಗೋರಿಯ ಪ್ರತಿಕೃತಿ) ಹೊತ್ತಿದ್ದ ಕೆಲವರು ದಾಳಿ ಮಾಡಿದ್ದಾರೆ ಎಂದು ಪಯಾಗ್ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ’ ಎಂದು ಪೊಲೀಸ್ ವರಿಷ್ಠಾಧಿಕಾರಿ ವೃಂದಾ ಶುಕ್ಷಾ ಹೇಳಿದ್ದಾರೆ.

ಈ ಸಂಬಂಧ ಎಫ್ಐಆರ್ ದಾಖಲಿಸಲಾಗಿದ್ದು, ಶುಕ್ರವಾರ 11 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ನಿಷೇಧಿತ ಪ್ರದೇಶದಲ್ಲಿ ಧಾರ್ಮಿಕ ಮೆರವಣಿಗೆ ನಡೆಸಲು ಯತ್ನಿಸಿದ ಕೆಲವರ ವಿರುದ್ಧ ನಾನ್ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಶುಕ್ಲಾ ಹೇಳಿದ್ದಾರೆ.

ಕೆಲವರು ಬಹಿರಂಗವಾಗಿ ಹರಿತವಾದ ಕತ್ತಿಗಳನ್ನು ಝಳಪಿಸುತ್ತಿರುವುದಕ್ಕೆ ಸಂಬಂಧಿಸಿದಂತೆ ಮತ್ತೊಂದು ಎಫ್ಐಆರ್ ದಾಖಲಾಗಿದ್ದು, ಈ ಪ್ರಕರಣದಲ್ಲಿ ಅಬು ತಾಲಿಬ್ ಎಂಬ ಒಬ್ಬ ವ್ಯಕ್ತಿಯನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
.ಗೊಂಡಾ | ಮೊಹರಂ: ಪ್ರತ್ಯೇಕ ಅವಘಡ; ಬಾಲಕ ಸಾವು, 19 ಮಂದಿಗೆ ಗಾಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.