ನವದೆಹಲಿ: ಜಾಮೀನು ಮಂಜೂರು ಮಾಡುವಂತೆ ಕೋರಿ 2002ರಲ್ಲಿ ನಡೆದಿದ್ದ ಗೋಧ್ರಾ ರೈಲು ಸ್ಫೋಟ ಪ್ರಕರಣದಲ್ಲಿ ಜೀವಾವಧಿ ಶಿಕ್ಷಗೆ ಗುರಿಯಾಗಿರುವ ಅಪರಾಧಿಗಳು ಸಲ್ಲಿಸಿರುವ ಅರ್ಜಿಗಳಿಗೆ ಸಂಬಂಧಿಸಿ ಪ್ರತಿಕ್ರಿಯೆ ನೀಡುವಂತೆ ಗುಜರಾತ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶಿಸಿದೆ.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಗುಜರಾತ್ ಸರ್ಕಾರದ ಪರವಾಗಿ ಸುಪ್ರೀಂ ಕೋರ್ಟ್‌ಗೆ ಹಾಜರಾಗಿದ್ದರು. ‘ಇದು ಕೇವಲ ಕಲ್ಲು ಎಸೆತದ ಪ್ರಕರಣವಲ್ಲ. ಅಪರಾಧಿಗಳು ರೈಲಿನ ಬೋಗಿಯ ಚಿಲಕವನ್ನು ಹೊರಗಿನಿಂದ ಹಾಕಿ, ಬೋಗಿಗೆ ಬೆಂಕಿ ಹಚ್ಚಿ ಹಲವು ಪ್ರಯಾಣಿಕರ ಸಾವಿಗೆ ಕಾರಣರಾಗಿದ್ದಾರೆ’ ಎಂದು ಅವರು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠದ ಎದುರು ಹೇಳಿದರು.

ಅವರ ವಾದ ಆಲಿಸಿದ ಪೀಠ, ‘ಈ ಕುರಿತು ನೀವು ಪರಿಶೀಲಿಸಿ. ಈ ಅರ್ಜಿ ವಿಚಾರಣೆಯನ್ನು ಎರಡು ವಾರಗಳ ಬಳಿಕ ನಿಗದಿಪಡಿಸುತ್ತೇವೆ’ ಎಂದು ತುಷಾರ್ ಅವರಿಗೆ ತಿಳಿಸಿತು.

2002ರ ಅಕ್ಟೋಬರ್‌ನಲ್ಲಿ ಗುಜರಾತ್‌ನ ಗೋಧ್ರಾ ಬಳಿ ಸಾಬರ್‌ಮತಿ ಎಕ್ಸ್‌ಪ್ರೆಸ್ ರೈಲಿನ ಬೋಗಿಗೆ ಬೆಂಕಿ ಹಚ್ಚಿ ಹಲವರನ್ನು ಕೊಲ್ಲಲಾಗಿತ್ತು. ಈ ಪ್ರಕರಣದಲ್ಲಿ 20 ಜನರ ದೋಷ ಸಾಬೀತಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.