ಕೋಲ್ಕತ್ತ: ನೆರೆಯ ಬಾಂಗ್ಲಾದೇಶದಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದ ಜನತೆ ಯಾವುದೇ ಪ್ರಚೋದನೆಗೆ ಒಳಗಾಗದೆ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.

ಬಾಂಗ್ಲಾದೇಶದ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಈ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯವು ವಿವರಣೆ ನೀಡಲಿದೆ ಎಂದಷ್ಟೆ ಹೇಳಿದ್ದಾರೆ.

ಬಾಂಗ್ಲಾದೇಶದ ಬೆಳವಣಿಗೆಗಳ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡರೂ ನಾವು ಅದಕ್ಕೆ ಬದ್ಧರಾಗಿರುತ್ತೇವೆ ಎಂದು ತಿಳಿಸಿದ್ದಾರೆ.

ಬಾಂಗ್ಲಾದೇಶದ ಪ್ರಧಾನಮಂತ್ರಿ ಶೇಖ್ ಹಸೀನಾ ಅವರು ಇಂದು ರಾಜೀನಾಮೆ ನೀಡಿದ್ದು, ಸಹೋದರಿಯೊಂದಿಗೆ ದೇಶದಿಂದ ಪಲಾಯನ ಮಾಡಿದ್ದಾರೆ ಎಂದು ಬಾಂಗ್ಲಾದೇಶದ ಸೇನಾ ಮುಖ್ಯಸ್ಥ ತಿಳಿಸಿದ್ದಾರೆ.

ಸರ್ಕಾರದ ವಿರುದ್ಧ ಭಾನುವಾರದಿಂದ ಆರಂಭವಾಗಿರುವ ಬೃಹತ್ ಪ್ರತಿಭಟನೆಯಿಂದಾಗಿ ಇದುವರೆಗೆ 106 ಮಂದಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಹಸೀನಾ ಅವರು ಇಂದು (ಸೋಮವಾರ) ರಾಜೀನಾಮೆ ಸಲ್ಲಿಸಿ, ದೇಶ ತೊರೆದಿದ್ದಾರೆ ಎಂದು ವರದಿಯಾಗಿದೆ.

ಬಾಂಗ್ಲಾದೇಶದಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ 4,096 ಕಿ.ಮೀ ಉದ್ದದ ಭಾರತ-ಬಾಂಗ್ಲಾದೇಶ ಗಡಿಯುದ್ದಕ್ಕೂ ಗಡಿ ಭದ್ರತಾ ಪಡೆಯು (ಬಿಎಸ್‌ಎಫ್) ಹೈ ಅಲರ್ಟ್ ಘೋಷಿಸಿದೆ.
.ಬಾಂಗ್ಲಾದಲ್ಲಿ ದಂಗೆ: ರಾಜೀನಾಮೆ ನೀಡಿ ದೇಶ ತೊರೆದ ಪ್ರಧಾನಿ ಶೇಖ್ ಹಸೀನಾ.ರಾಜೀನಾಮೆ ಬಳಿಕ ಹಸೀನಾ ಪಲಾಯನ, ದೇಶ ಮುನ್ನಡೆಸಲು ಮಧ್ಯಂತರ ಸರ್ಕಾರ: ಬಾಂಗ್ಲಾ ಸೇನೆ.ಶೇಖ್ ಹಸೀನಾ ಭೇಟಿಯಾದ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್; ಢಾಕಾ ಪರಿಸ್ಥಿತಿಯ ಚರ್ಚೆ.Bangla Unrest: ಹಸೀನಾ ವಿರುದ್ಧ ಸಾವನ್ನೂ ಲೆಕ್ಕಿಸದ ವಿದ್ಯಾರ್ಥಿಗಳ ಆಕ್ರೋಶ ಏಕೆ?.Bangla Unrest: ಇಂದಿರಾ ಗಾಂಧಿ ಸಾಂಸ್ಕೃತಿಕ ಕೇಂದ್ರ, ಹಿಂದೂ ದೇವಾಲಯಗಳಿಗೆ ಹಾನಿ.Bangla Unrest |ಬಾಂಗ್ಲಾ ಪರಿಸ್ಥಿತಿ ಬಗ್ಗೆ ಸಂಪುಟ ಸಮಿತಿ ಸಭೆಯಲ್ಲಿ ಮೋದಿ ಚರ್ಚೆ.Bangla Unrest | ರಾಹುಲ್–ಜೈಶಂಕರ್ ಭೇಟಿ; ಬಾಂಗ್ಲಾದ ಬೆಳವಣಿಗೆಗಳ ಬಗ್ಗೆ ಚರ್ಚೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.