ಶುಕ್ರವಾರ, 27 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಯಾಂತ್‌ ಸಿಂಗ್‌ ಹತ್ಯೆ ಪ್ರಕರಣ: ಕೇಂದ್ರದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

Published : 27 ಸೆಪ್ಟೆಂಬರ್ 2024, 14:46 IST
Last Updated : 27 ಸೆಪ್ಟೆಂಬರ್ 2024, 14:46 IST
ಫಾಲೋ ಮಾಡಿ
Comments

ನವದೆಹಲಿ: 1995ರಲ್ಲಿ ಪಂಜಾಬ್ ಮುಖ್ಯಮಂತ್ರಿಯಾಗಿದ್ದ ಬಿಯಾಂತ್ ಸಿಂಗ್ ಅವರನ್ನು ಹತ್ಯೆಗೈದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಬಬ್ಬರ್ ಖಾಲ್ಸಾ ಭಯೋತ್ಪಾದಕ ಜಗತಾರ್ ಸಿಂಗ್ ಹವಾರ ಸಲ್ಲಿಸಿರುವ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರ ಮತ್ತು ಸಂಬಂಧಿಸಿದ ಇತರ ರಾಜ್ಯ ಸರ್ಕಾರಗಳ ಪ್ರತಿಕ್ರಿಯೆ ಕೇಳಿದೆ.

ದೆಹಲಿಯ ತಿಹಾರ್ ಜೈಲಿನಿಂದ ಪಂಜಾಬ್‌ನ ಯಾವುದೇ ಜೈಲಿಗೆ ತನ್ನನ್ನು ವರ್ಗಾವಣೆ ಮಾಡುವಂತೆ ಜಗತಾರ್ ಸಿಂಗ್ ಹವಾರ ಮನವಿ ಸಲ್ಲಿಸಿದ್ದಾನೆ. 

ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಕೆ.ವಿ. ವಿಶ್ವನಾಥನ್ ಅವರಿದ್ದ ಪೀಠವು ಹವಾರ ಮನವಿಯ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಮತ್ತು ದೆಹಲಿ ಮತ್ತು ಪಂಜಾಬ್ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ನಾಲ್ಕು ವಾರ ಮುಂದೂಡಿದೆ.

1995ರ ಆಗಸ್ಟ್‌ 31ರಂದು ಚಂಡೀಗಢದ ಸಿವಿಲ್‌ ಸೆಕ್ರೆಟರಿಯೇಟ್‌ನ ಪ್ರವೇಶದ್ವಾರದಲ್ಲಿ ಸ್ಫೋಟ ನಡೆಸಿ ಬಿಯಾಂತ್‌ ಸಿಂಗ್‌  ಮತ್ತು 16 ಜನರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಹವಾರಾ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾನೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT