ಕೋಲ್ಕತ್ತ: ಕೇಂದ್ರದ ಶಿಕ್ಷಣ ಖಾತೆಯ ರಾಜ್ಯ ಸಚಿವ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸುಕಾಂತ ಮಜುಂದಾರ್ ಅವರನ್ನು ಪಶ್ಚಿಮ ಬಂಗಾಳ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಬುಧವಾರ ಮಧ್ಯಾಹ್ನ ಬಂಧಿಸಿ, ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.

ಹಿಂಸಾಚಾರ ಪೀಡಿತ, ಮುರ್ಷಿದಾಬಾದ್ನ ಬೆಲ್ಡಾಂಗಾದ ಪರಿಸ್ಥಿತಿಯನ್ನು ಅವಲೋಕಿಸಲು ಹೊರಟಿದ್ದ ಮಜುಂದಾರ್ ಅವರನ್ನು ನಾದಿಯಾ ಜಿಲ್ಲೆಯ ಕೃಷ್ಣನಗರ ಪ್ರದೇಶದಲ್ಲಿ ಬಂಧಿಸಲಾಯಿತು ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

ಮಜುಂದಾರ್ ಅವರು ನಿಷೇಧಾಜ್ಞೆ ಜಾರಿಯಲ್ಲಿದ್ದ ಸ್ಥಳಕ್ಕೆ ತೆರಳುತ್ತಿದ್ದರು. ಅವರ ವಿರುದ್ಧ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (ಬಿಎನ್ಎಸ್ಎಸ್) ಸೆಕ್ಷನ್ 170ರ ಅಡಿಯಲ್ಲಿ ಕ್ರಮ ಜರುಗಿಸಲಾಗಿದೆ. ಗಂಭೀರ ಅಪರಾಧಗಳನ್ನು ತಡೆಯುವ ಸಲುವಾಗಿ ಅವರನ್ನು ಬಂಧಿಸಲಾಯಿತು ಎಂದು ಕೃಷ್ಣನಗರ ಪೊಲೀಸ್ ಜಿಲ್ಲೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೊತ್ವಾಲಿ ಠಾಣೆ ಪೊಲೀಸರಿಂದ ಬಂಧನಕ್ಕೆ ಒಳಗಾದ ಸಚಿವ ಮಜುಂದಾರ್, ‘ಬೆಲ್ಡಾಂಗಾದಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಲು ಹೋಗುತ್ತಿದ್ದೆ. ಪೊಲೀಸರು ನಮ್ಮನ್ನು ಅಲ್ಲಿಗೆ ಹೋಗದಂತೆ ತಡೆದಿದ್ದಾರೆ. ಇದನ್ನು ವಿರೋಧಿಸಿ ನಮ್ಮ ಪಕ್ಷದ ಕಾರ್ಯಕರ್ತರು ಇತರ ಪ್ರದೇಶಗಳಲ್ಲಿ ರಸ್ತೆ ತಡೆ ನಡೆಸಿದ್ದಾರೆ’ ಎಂದು ತಿಳಿಸಿದರು.

ಮಜುಂದಾರ್ ಬಂಧನದ ನಂತರ ಬಿಜೆಪಿ ಕಾರ್ಯಕರ್ತರು ಪೊಲೀಸರ ಕ್ರಮವನ್ನು ಖಂಡಿಸಿ ರಾಜ್ಯದ ವಿವಿಧೆಡೆ ಪ್ರತಿಭಟನೆ ನಡೆಸಿದರು.

ಎರಡು ಸಮುದಾಯಗಳ ನಡುವಿನ ಘರ್ಷಣೆಯಲ್ಲಿ ಸುಮಾರು 17 ಜನರು ಗಾಯಗೊಂಡಿರುವ ಬೆಲ್ಡಾಂಗಾಕ್ಕೆ ಭೇಟಿ ನೀಡಲು ಮಂಗಳವಾರ ಕೂಡ ಮಜುಂದಾರ್ ಯತ್ನಿಸಿದ್ದರು. ಆದರೆ, ಪೊಲೀಸರು ಇದಕ್ಕೆ ಅವಕಾಶ ನೀಡಿರಲಿಲ್ಲ.

‘ಬೆಲ್ಡಾಂಗಾದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಅಲ್ಲಿಗೆ ಭೇಟಿ ನೀಡಲು ಯಾರಿಗೂ ಅವಕಾಶ ಇಲ್ಲ. ಹಾಗಾಗಿಯೇ ಇಂದು ಭೇಟಿ ನೀಡಲು ಯತ್ನಿಸಿದ ಕೇಂದ್ರ ಸಚಿವ ಮಜುಂದಾರ್ ಅವರನ್ನು ತಡೆಯಲಾಯಿತು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.