ಕೋಲ್ಕತ್ತ: ಪಶ್ಚಿಮ ಬಂಗಾಳದ ವಿಧಾನಸಭೆಯಲ್ಲಿ ರಾಜ್ಯಪಾಲ ಜಗದೀಪ್ ಧನಕರ್ ಅವರ ಭಾಷಣಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಬಿಜೆಪಿ ಶಾಸಕರಾದ ಸುದೀಪ್ ಮುಖೋಪಾಧ್ಯಾಯ ಮತ್ತು ಮಿಹಿರ್ ಗೋಸ್ವಾಮಿ ಅವರನ್ನು ಬಜೆಟ್ ಅಧಿವೇಶನದ ಉಳಿದ ಅವಧಿಗೆ ಅಮಾನತುಗೊಳಿಸಲಾಗಿದೆ.

ಅಮಾನತು ಮಾಡುವ ಸಂಬಂಧ ಸಂಸದೀಯ ವ್ಯವಹಾರಗಳ ಸಚಿವ ಪಾರ್ಥ ಚಟರ್ಜಿ ಅವರು ಮಂಡಿಸಿದ ಪ್ರಸ್ತಾವನೆಯನ್ನು ಸ್ಪೀಕರ್ ಬಿಮನ್ ಬ್ಯಾನರ್ಜಿ ಮತ ಹಾಕಿದರು. ಧ್ವನಿ ಮತದ ಮೂಲಕ ಪ್ರಸ್ತಾವನೆಯನ್ನು ಅಂಗೀಕರಿಸಲಾಯಿತು.

ಮಹಾರಾಷ್ಟ್ರ: ನವಾಬ್ ಮಲಿಕ್ ರಾಜೀನಾಮೆಗೆ ಪಟ್ಟು; ದೇವೇಂದ್ರ ಫಡಣವಿಸ್ ವಶಕ್ಕೆ

ಮಾರ್ಚ್ 7ರಂದು ರಾಜ್ಯಪಾಲರು ಭಾಷಣ ಮಾಡುವ ವೇಳೆ ಈ ಇಬ್ಬರು ಶಾಸಕರು ಸೇರಿದಂತೆ ವಿರೋಧ ಪಕ್ಷವಾದ ಬಿಜೆಪಿ ಸದಸ್ಯರು ಗದ್ದಲವನ್ನುಂಟು ಮಾಡಿದರು. ಇದರಿಂದ ಬೇಸರಗೊಂಡ ರಾಜ್ಯಪಾಲರು ತಮ್ಮ ಭಾಷಣದ ಮೊದಲ ಮತ್ತು ಕೊನೆ ಸಾಲನ್ನು ಮಾತ್ರ ಓದಿ ಸದನದಿಂದ ಹೊರ ನಡೆದಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.