ಕೋಲ್ಕತ್ತ: ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸಲು ಅನುವಾಗುವಂತೆ ಕಾಯ್ದೆಗೆ ತಿದ್ದುಪಡಿ ತರಲು ಪಶ್ಚಿಮ ಬಂಗಾಳ ಸರ್ಕಾರ ಎರಡು ದಿನಗಳ ವಿಶೇಷ ಅಧಿವೇಶನ ಕರೆದಿದೆ.

ವಿಧಾನಸಭೆಯಲ್ಲಿ ತಿದ್ದುಪಡಿ ಮಸೂದೆಯನ್ನು ಮಂಡಿಸಿ ಅಂಗೀಕಾರ ಪಡೆಯಲಾಗುವುದು ಎಂದು ಸರ್ಕಾರ ತಿಳಿಸಿದೆ.
.ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ , ಕೊಲೆ: ಸಂದೀಪ್ ಘೋಷ್ ಐಎಂಎ ಸದಸ್ಯತ್ವ ರದ್ದು.ಆಳಂದ: ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ಪ್ರತಿಭಟನೆ.
ಸೆಪ್ಟೆಂಬರ್ 2ರಿಂದ ಎರಡು ದಿನಗಳ ಅಧಿವೇಶನ ನಡೆಸಲಾಗವುದು ಎಂದು ಸಂಸದೀಯ ವ್ಯವಹಾರಗಳ ಸಚಿವ ಸೋಮದೇವ್ ತಿಳಿಸಿದ್ದಾರೆ.

ಚಾಲ್ತಿಯಲ್ಲಿರುವ ಮಸೂದೆಗೆ ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸಲು ಅನುವಾಗುವಂತೆ ತಿದ್ದುಪಡಿ ತರಲಾಗುವುದು. ಇದರಿಂದ ಅತ್ಯಾಚಾರದಂತಹ ಕೃತ್ಯಗಳಲ್ಲಿ ತೊಡಗುವವರಿಗೆ ಮರಣದಂಡನೆ ವಿಧಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಈ ಹಿಂದೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಅತ್ಯಾಚಾರದಂತಹ ಕೃತ್ಯಗಳನ್ನು ರಾಜ್ಯ ಸರ್ಕಾರ ಸಹಿಸುವುದಿಲ್ಲ ಎಂದು ಹೇಳಿದ್ದರು.

ವಿಶೇಷ ಅಧಿವೇಶನಕ್ಕೆ ರಾಜ್ಯಪಾಲರು ಅನುಮೋದನೆ ನೀಡುವುದನ್ನು ವಿಳಂಬ ಮಾಡಿದರೆ, ರಾಜಭವನದ ಎದುರೇ ಧರಣಿ ಕೂರುತ್ತೇನೆ ಎಂದೂ ಅವರು ಹೇಳಿದ್ದರು.
.ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ,ಕೊಲೆ: ಪ್ರಮುಖ ಆರೋಪಿಗೆ ಸುಳ್ಳು ಪತ್ತೆ ಪರೀಕ್ಷೆ.ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ: ಪ್ರಮುಖ ಆರೋಪಿಗೆ ಸುಳ್ಳು ಪತ್ತೆ ಪರೀಕ್ಷೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.