ಪೂರ್ಣಿಯಾ: ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ರೈತರ ವಿಶ್ವಾಸ ಕಳೆದುಕೊಂಡಿದೆ, ಕಾಂಗ್ರೆಸ್ಗೆ ಮತಚಲಾಯಿಸಿ ಅಧಿಕಾರ ನೀಡಿದರೆ ಅದನ್ನು ಮತ್ತೆ ಗಳಿಸಲು ಪ್ರಯತ್ನಿಸುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಬಿಹಾರದ ಪೂರ್ಣಿಯಾ ಜಿಲ್ಲೆಯಲ್ಲಿ ಭಾರತ್ ಜೋಡೊ ನ್ಯಾಯ ಯಾತ್ರೆಯ ರ್ಯಾಲಿಯಲ್ಲಿ ಜನರನ್ನು ಉದ್ದೇಶಿಸಿ ರಾಹುಲ್ ಗಾಂಧಿ ಮಾತನಾಡಿದ್ದಾರೆ.

‘ಮೋದಿ ಸರ್ಕಾರ ರೈತರ ಭಯವನ್ನು ಹೋಗಲಾಡಿಸಲು ಸೋತಿದೆ. ನಿಜ ಹೇಳಬೇಕೆಂದರೆ ರೈತರ ವಿಶ್ವಾಸವನ್ನೇ ಕಳೆದುಕೊಂಡಿದೆ. ಹೀಗಾಗಿ ನಿಮ್ಮಲ್ಲಿ ನಾನು ಮನವಿ ಮಾಡುತ್ತೇನೆ, ನಮಗೆ ಒಂದು ಅವಕಾಶ ಕೊಡಿ, ಆ ವಿಶ್ವಾಸವನ್ನು ಗಳಿಸಲು ಪ್ರಯತ್ನಿಸುತ್ತೇವೆ’ ಎಂದರು.

ಇದನ್ನು ಕೇಳಿ ಜನ ಚಪ್ಪಾಳೆ ತಟ್ಟುತ್ತಿದ್ದಂತೆ, ‘ಇದು ಕೇವಲ ಪೊಳ್ಳು ಭರವಸೆಯಲ್ಲ, ಈ ಹಿಂದಿನ ನಮ್ಮ ಕೆಲಸಗಳೇ ಇದಕ್ಕೆ ಸಾಕ್ಷಿ. ನಾವು ರೈತ ಸ್ನೇಹಿ ಭೂಸ್ವಾಧೀನ ಮಸೂದೆಯನ್ನು ತಂದಿದ್ದೇವೆ, ₹72,000 ಕೋಟಿ ಸಾಲಮನ್ನಾ ಮಾಡಿದ್ದೇವೆ. ಛತ್ತೀಸ್ಗಢ ಮತ್ತು ರಾಜಸ್ಥಾನದಂತಹ ರಾಜ್ಯಗಳಲ್ಲಿ ರೈತರು ತಮ್ಮ ಉತ್ಪನ್ನಗಳನ್ನು ಉತ್ತಮ ಬೆಲೆಯಲ್ಲಿ ಮಾರಾಟ ಮಾಡಿ ಆದಾಯ ಗಳಿಸಿದ್ದಾರೆ’ ಎಂದು ಜನರನ್ನು ಉದ್ದೇಶಿಸಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.