ಅಕೋಲ: ಜಮ್ಮುಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಮಾಡಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಖಂಡಿಸುತ್ತಿರುವ ವಿಪಕ್ಷಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಟೀಕಾ ಪ್ರಹಾರ ಮಾಡಿದ್ದಾರೆ.

ಮಹಾರಾಷ್ಟ್ರದ ಅಕೋಲದಲ್ಲಿ ಬುಧವಾರ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಮಾಡುವ ಮೂಲಕ ಬಿಜೆಪಿ ದೇಶದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಯತ್ನಿಸುತ್ತಿದೆ ಎಂದು ವಿಪಕ್ಷಗಳುಹೇಳಿದ್ದು ನಾಚಿಕೆಗೇಡು ಎಂದಿದ್ದಾರೆ.

ಮಹಾರಾಷ್ಟ್ರ ಮತ್ತು ಜಮ್ಮು ಕಾಶ್ಮೀರ ನಡುವಿನ ಸಂಬಂಧವನ್ನು ಪ್ರಶ್ನಿಸುವವರು ರಾಜಕೀಯ ಅವಕಾಶವಾದಿಗಳು.ಜಮ್ಮು ಮತ್ತು ಕಾಶ್ಮೀರಕ್ಕಾಗಿ ತಮ್ಮ ಪ್ರಾಣ ತ್ಯಾಗ ಮಾಡಿದ ಮಹಾರಾಷ್ಟ್ರದ ಪುತ್ರರು ನಾವು ಎಂಬ ಹೆಮ್ಮೆ ಇದೆ. ಆದರೆ ಇವತ್ತು ರಾಜಕಾರಣ ಮತ್ತು ಕುಟುಂಬ ರಾಜಕಾರಣದ ಆಸಕ್ತಿಯಿಂದ ಮುಂದೆ ಬಂದವರು ಮಹಾರಾಷ್ಟ್ರ ಮತ್ತು ಜಮ್ಮು ಕಾಶ್ಮೀರಕ್ಕೆ ಏನು ಸಂಬಂಧ ಎಂದು ಕೇಳುತ್ತಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ.

ಇದನ್ನೂ ಓದಿ:‘ಜೇಬುಗಳ್ಳ’ರಂತೆ ಗಮನ ಬೇರೆಡೆ ಸೆಳೆಯುವ ಪ್ರಧಾನಿ ಮೋದಿ: ರಾಹುಲ್ ಗಾಂಧಿ ಟೀಕೆ

ರಾಷ್ಟ್ರ ನಿರ್ಮಾಣಕ್ಕಾಗಿ ರಾಷ್ಟ್ರೀಯತೆಯ ಪ್ರೇರಣೆ ನೀಡಿದವರು ವೀರ್ ಸಾವರ್ಕರ್. ಬಾಬಾ ಸಾಹೇಬ್ ಅಂಬೇಡ್ಕರ್‌ಗೆ ದಶಕಗಳ ಕಾಲ ಭಾರತರತ್ನ ನೀಡದೆ ಪ್ರತಿ ಬಾರಿಯೂ ಅವಮಾನ ಮಾಡಿದ ಜನರೇ ಈಗ ಹಿಂದುತ್ವವಾದಿ ವಿ.ಡಿ. ಸಾವರ್ಕರ್‌ನ್ನು ಅವಮಾನ ಮಾಡುತ್ತಿದ್ದಾರೆ ಎಂದು ಮೋದಿ ಹೇಳಿದ್ದಾರೆ.

ಮಂಗಳವಾರ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಅದರಲ್ಲಿ ಸಾವರ್ಕರ್, ಜ್ಯೋತಿಬಾ ಫುಲೆ ಮತ್ತು ಸಾವಿತ್ರಿಬಾಯಿ ಫುಲೆ ಅವರಿಗೆ ಭಾರತರತ್ನ ನೀಡುವ ಭರವಸೆ ನೀಡಿದೆ.

ಇದನ್ನೂ ಓದಿ:ಪಾಕಿಸ್ತಾನಕ್ಕೆ ಹರಿಯುವ ನೀರನ್ನು ಹರಿಯಾಣದ ರೈತರಿಗೆ ಒದಗಿಸುವೆ: ಪ್ರಧಾನಿ ಮೋದಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.