ರಾಯಪುರ: ಛತ್ತೀಸಗಡದಲ್ಲಿರುವ ಸರ್ಕಾರಿ ಸ್ವಾಮ್ಯದ ಭಿಲಾಯಿ ಉಕ್ಕು ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೇರಿದೆ.

ಭಾರತೀಯ ಉಕ್ಕು ಪ್ರಾಧಿಕಾರದ (ಸೈಲ್) ಕಾರ್ಖಾನೆಯ ಗ್ಯಾಸ್ ಪೈಪ್ಲೈನ್ನಲ್ಲಿ ಮಂಗಳವಾರ ಸಂಭವಿಸಿದ ಸ್ಫೋಟದಲ್ಲಿ 9 ಮಂದಿ ಮೃತಪಟ್ಟಿದ್ದರು.

‘ತೀವ್ರ ಸುಟ್ಟ ಗಾಯಗಳಾಗಿದ್ದ 14 ಮಂದಿಯನ್ನು ಭಿಲಾಯಿಯ ಆಸ್ಪತ್ರೆಗೆ ದಾಖಲಿಸಿದ್ದು, ಬುಧವಾರ ಇಬ್ಬರು ಮೃತಪಟ್ಟಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ(ಎಐಐಎಂಎಸ್) ನಾಲ್ವರು ವೈದ್ಯರ ತಂಡವನ್ನು ಗಾಯಾಳುಗಳ ಚಿಕಿತ್ಸೆಗಾಗಿ ಛತ್ತೀಸಗಡಕ್ಕೆ ಕಳುಹಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ತಿಳಿಸಿದ್ದಾರೆ.

ಪರಿಹಾರ ಘೋಷಣೆ: ಸ್ಫೋಟದಲ್ಲಿ ಮೃತಪಟ್ಟವರ ಕುಟುಂಬದವರಿಗೆ ತಲಾ ₹30ಲಕ್ಷ, ತೀವ್ರ ಗಾಯಗೊಂಡವರಿಗೆ ತಲಾ ₹15 ಲಕ್ಷ ಹಾಗೂ ಸಣ್ಣಪುಟ್ಟ ಗಾಯಗಳಾದವರಿಗೆ ತಲಾ ₹2ಲಕ್ಷ ಪರಿಹಾರ ನೀಡಲಾಗುವುದು’ ಎಂದು ಉಕ್ಕು ಸಚಿವಾಲಯ ತಿಳಿಸಿದೆ.

ಸಿಇಒ ವಜಾ: ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಭಿಲಾಯಿ ಉಕ್ಕು ಕಾರ್ಖಾನೆಯ ಸಿಇಒ ಅವರನ್ನು ವಜಾ ಮಾಡಲಾಗಿದೆ. ಇತರ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:ಭಿಲಾಯಿ ಉಕ್ಕು ಘಟಕದಲ್ಲಿ ಅನಿಲ ಪೈಪ್ಲೈನ್ ಸ್ಫೋಟ: 6 ಸಾವು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.