ನವದೆಹಲಿ: ಸಿಎಎ ವಿರುದ್ಧದ ಪ್ರತಿಭಟನೆಯಲ್ಲಿ ಬಂಧಿತರಾದ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರ ಜಾಮೀನು ಅರ್ಜಿ ವಿಚಾರಣೆ ಸಂದರ್ಭದಲ್ಲಿ ಪೊಲೀಸರನ್ನು ದೆಹಲಿ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

ಪ್ರತಿಭಟಿಸುವುದು ಸಂವಿಧಾನಿಕ ಹಕ್ಕು ಎಂದಿರುವ ನ್ಯಾಯಾಲಯವು, ‘ಸಂಸತ್ನಲ್ಲಿ ಏನು ಹೇಳಬೇಕಿತ್ತೋ ಅದನ್ನು ಹೇಳದೇ ಇರುವುದರಿಂದ ಜನರು ರಸ್ತೆಗಳಿದು ಪ್ರತಿಭಟನೆ ನಡೆಸುತ್ತಿದ್ದಾರೆ’ ಎಂದು ತಿಳಿಸಿದೆ.

ದೆಹಲಿಯ ಜಾಮಾ ಮಸೀದಿ ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಚಂದ್ರಶೇಖರ್ ಆಜಾದ್ ಅವರನ್ನು ಬಂಧಿಸಿದ ಪೊಲೀಸರನ್ನು ಪ್ರಶ್ನಿಸಿರುವ ನ್ಯಾಯಾಲಯವು, ‘ದೆಹಲಿಯಲ್ಲಿರುವ ಜಾಮಾ ಮಸೀದಿ ಪಾಕಿಸ್ತಾನದಲ್ಲಿ ಇದೆ ಎನ್ನುವಂತೆ ನೀವು ವರ್ತಿಸುತ್ತಿದ್ದೀರಿ. ಅದು ಪಾಕಿಸ್ತಾನದಲ್ಲಿದ್ದರೂ ನೀವು ಅಲ್ಲಿಗೆ ಹೋಗಿ ಪ್ರತಿಭಟಿಸಬಹುದು. ಪಾಕಿಸ್ತಾನ ಅವಿಭಜಿತ ಭಾರತದ ಒಂದು ಭಾಗವಾಗಿತ್ತು. ಜಾಮಾ ಮಸೀದಿ ಆವರಣದಲ್ಲಿ ಜನರು ಧರಣಿ ಮಾಡುವುದರಲ್ಲಿ ತಪ್ಪೇನಿದೆ’ ಎಂದು ಕೇಳಿದೆ.

ಕಳೆದ ತಿಂಗಳು ಜಾಮಾ ಮಸೀದಿ ಆವರಣದಲ್ಲಿ ನಡೆದ ಪ್ರತಿಭಟನೆ ವೇಳೆ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.