ನವದೆಹಲಿ: ಹಾಥರಸ್ನಲ್ಲಿ 19 ವರ್ಷದ ದಲಿತ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರು ಸಂತ್ರಸ್ತೆಯ ಕುಟುಂಬವನ್ನು ಭಾನುವಾರ ಭೇಟಿಯಾಗಲಿದ್ದಾರೆ.

ಚಂದ್ರಶೇಖರ್ ಆಜಾದ್ ಭೇಟಿ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಪೊಲೀಸರು ಹಾಥರಸ್ ಜಿಲ್ಲೆಯಾದ್ಯಂತ ಬಿಗಿ ಭದ್ರತೆ ಕೈಗೊಂಡಿದ್ದಾರೆ.

ಭೀಮ್ ಆರ್ಮಿ ಬೆಂಬಲಿಗರೊಂದಿಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಆಜಾದ್ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಯುವತಿಯ ಕುಟುಂಬವನ್ನು ಶನಿವಾರ ಭೇಟಿಯಾಗಿದ್ದರು.

ಇದನ್ನೂ ಓದಿ | ಹಾಥರಸ್: ಅತ್ಯಾಚಾರ ಸಂತ್ರಸ್ತೆ ಕುಟುಂಬದವರ ಭೇಟಿಯಾದ ರಾಹುಲ್, ಪ್ರಿಯಾಂಕಾ ಗಾಂಧಿ

ಎರಡು ವಾರಗಳ ಹಿಂದೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಹಾಥರಸ್ನ 19 ವರ್ಷದ ಯುವತಿ ದೆಹಲಿಯಲ್ಲಿ ಮಂಗಳವಾರ ಮೃತಪಟ್ಟಿದ್ದರು.

ಮೃತಪಟ್ಟ ಯುವತಿಯ ಅಂತ್ಯಕ್ರಿಯೆಯನ್ನು ಉತ್ತರ ಪ್ರದೇಶ ಪೊಲೀಸರು ನಡುರಾತ್ರಿಯಲ್ಲೇ ಮಾಡಿ ಮುಗಿಸಿದ್ದರು. ಅಂತ್ಯಕ್ರಿಯೆಗೆ ತೆರಳಲು ತಮಗೂ ಅವಕಾಶ ನೀಡಿರಲಿಲ್ಲ ಎಂದು ಸಂತ್ರಸ್ತೆಯ ಕುಟುಂಬ ಸದಸ್ಯರು ಆರೋಪಿಸಿದ್ದರು. ಈ ಘಟನೆಯು ದೇಶದಾದ್ಯಂತ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.