ಗುಜರಾತ್ನ ಹೊಸ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಆಯ್ಕೆಯಾಗಿದ್ದಾರೆ. ಮೊದಲ ಸಾರಿ ಶಾಸಕರಾಗಿರುವ ಪಟೇಲ್ ಅವರಿಗೆ ಬಿಜೆಪಿ ಹೈಕಮಾಂಡ್ ಸಿಎಂ ಸ್ಥಾನವನ್ನು ನೀಡಲು ನಿರ್ಧರಿಸಿದ್ದು ಅಚ್ಚರಿಯ ಬೆಳವಣಿಗೆ ಎಂದೇ ಹೇಳಬಹುದು.

ಭೂಪೇಂದ್ರ ಪಟೇಲ್ ಯಾರು ಎಂಬುದರ ಬಗ್ಗೆ ತಿಳಿದುಕೊಳ್ಳುವ ಕುತೂಹಲ ನಿಮಗಿದ್ದರೆ, ಇಲ್ಲಿದೆ ಸಂಕ್ಷಿಪ್ತ ಮಾಹಿತಿ...

*59 ವರ್ಷದ ಭೂಪೇಂದ್ರ ಪಟೇಲ್ ಗುಜರಾತ್ನ ಮಾಜಿ ಮುಖ್ಯಮಂತ್ರಿ ಆನಂದಿ ಬೆನ್ ಪಟೇಲ್ ಅವರ ಆಪ್ತರು.

*ಘಾಟ್ಲೋಡಿಯಾ ಕ್ಷೇತ್ರದಿಂದ 2017ರಲ್ಲಿ ಮೊದಲ ಸಾರಿ ಶಾಸಕರಾಗಿ ಭೂಪೇಂದ್ರ ಪಟೇಲ್ ಆಯ್ಕೆಯಾಗಿದ್ದಾರೆ. ಈ ಕ್ಷೇತ್ರವನ್ನು ಆನಂದಿ ಬೆನ್ ಪಟೇಲ್ ಪ್ರತಿನಿಧಿಸಿದ್ದರು.

*ಕಳೆದ ಬಾರಿಯ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ ಶಶಿಕಾಂತ್ ಪಟೇಲ್ ವಿರುದ್ಧ ಸ್ಪರ್ಧಿಸಿದ್ದ ಭೂಪೇಂದ್ರ ಪಟೇಲ್ 1 ಲಕ್ಷಕ್ಕೂ ಅಧಿಕ ಮತಗಳಿಂದ ಜಯಗಳಿಸಿದ್ದರು.

*ಭೂಪೇಂದ್ರ ಪಟೇಲ್ ಅವರು ಈ ಹಿಂದೆ ಅಹಮದಾಬಾದ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

*ಅಹಮದಾಬಾದ್ನ ಸರ್ಕಾರಿ ಪಾಲಿಟೆಕ್ನಿಕ್ನಲ್ಲಿ ವ್ಯಾಸಂಗ ಮಾಡಿರುವ ಪಟೇಲ್ ಸಿವಿಲ್ ಎಂಜಿನಿಯರಿಂಗ್ನಲ್ಲಿ ಡಿಪ್ಲೊಮಾ ಪಡೆದಿದ್ದಾರೆ.

*2017ರ ವಿಧಾನಸಭೆ ಚುನಾವಣೆ ಸಮಯದಲ್ಲಿ ₹5 ಕೋಟಿಗೂ ಅಧಿಕ ಆಸ್ತಿ ಹೊಂದಿರುವುದಾಗಿ ಪಟೇಲ್ ಘೋಷಿಸಿಕೊಂಡಿದ್ದಾರೆ.

*ಪಾಟೀದಾರ್ ಸಮುದಾಯಕ್ಕೆ ಸೇರಿರುವ ಪಟೇಲ್ ಅವರ ಹೆಸರು ಗುಜರಾತ್ ಸಿಎಂ ರೇಸ್ನಲ್ಲಿ ಕಾಣಿಸಿಕೊಂಡಿರಲಿಲ್ಲ.

ಇದನ್ನೂ ಓದಿ: ಭೂಪೇಂದ್ರ ಪಟೇಲ್ ಗುಜರಾತ್ನ ನೂತನ ಮುಖ್ಯಮಂತ್ರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.