ನವದೆಹಲಿ: ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಸರ್ಕಾರದಲ್ಲಿ ಸಚಿವರಾಗಿರುವ ಭೂಪೇಂದ್ರ ಸಿಂಗ್ ಚೌಧರಿ ಅವರನ್ನು ಉತ್ತರ ಪ್ರದೇಶ ಬಿಜೆಪಿ ಘಟಕದ ಅಧ್ಯಕ್ಷರನ್ನಾಗಿ ಗುರುವಾರ ನೇಮಕ ಮಾಡಲಾಗಿದೆ. ರಾಜೀವ್ ಭಟ್ಟಾಚಾರ್ಯ ಅವರನ್ನು ತ್ರಿಪುರಾ ಘಟಕದ ಮುಖ್ಯಸ್ಥರನ್ನಾಗಿ ಮಾಡಲಾಗಿದೆ.

ಇದನ್ನೂ ಓದಿ:ಕಾರ್ಯಕಾರಿಣಿ ಬಳಿಕ ಬಿಜೆಪಿ ರಾಜ್ಯ ಘಟಕಕ್ಕೆ ಹೊಸ ಅಧ್ಯಕ್ಷ ?

ಹಿಮಾಚಲ ಪ್ರದೇಶದಲ್ಲಿ ಸೌದನ್ ಸಿಂಗ್ ಅವರನ್ನು ಚುನಾವಣಾ ಉಸ್ತುವಾರಿಯಾಗಿ ನೇಮಿಸಲಾಗಿದ್ದು, ದೇವೇಂದ್ರ ಸಿಂಗ್ ರಾಣಾ ಅವರನ್ನು ಸಹ-ಪ್ರಭಾರಿಯನ್ನಾಗಿ ನಿಯೋಜಿಸಲಾಗಿದೆ.

ಉತ್ತರ ಪ್ರದೇಶ ಸರ್ಕಾರದಲ್ಲಿ ಸಚಿವರಾಗಿ ನೇಮಕವಾಗಿರುವ ಸ್ವತಂತ್ರ ದೇವ್ ಸಿಂಗ್ ಅವರು ಈ ವರೆಗೆ ಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷರಾಗಿದ್ದರು.

ಕೃಷಿ ಕಾನೂನುಗಳ ವಿರುದ್ಧ ರೈತರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಪ್ರಭಾವಿ ಜಾಟ್ ಸಮುದಾಯದ ವಿಶ್ವಾಸ ಗಳಿಸುವ ತಂತ್ರವಾಗಿ ಬಿಜೆಪಿಯು ಚೌಧರಿ ಅವರನ್ನು ನೇಮಿಸಲಾಗಿದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ, ಹರಿಯಾಣದಲ್ಲಿ ಒಪಿ ಧನಕರ್ ಮತ್ತು ರಾಜಸ್ಥಾನದಲ್ಲಿ ಸತೀಶ್ ಪೂನಿಯಾ ಅವರನ್ನು ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಈ ಇಬ್ಬರೂ ನಾಯಕರು ಜಾಟ್ ಸಮುದಾಯದವರೇ ಆಗಿದ್ದರು. ಈಗ ಉತ್ತರ ಪ್ರದೇಶದಲ್ಲೂ ಜಾಟ್ ಸಮುದಾಯದವರಿಗೇ ಬಿಜೆಪಿ ಮಣೆ ಹಾಕಿದೆ.

‘ಒಬ್ಬರಿಗೆ ಒಂದೇ ಹುದ್ದೆ’ ಎಂಬ ಪಕ್ಷದ ನೀತಿಗೆ ಅನುಗುಣವಾಗಿ ಸ್ವತಂತ್ರ ದೇವ್ ಸಿಂಗ್ ಅವರು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಉತ್ತರ ಪ್ರದೇಶದದ ಪೂರ್ವ ಭಾಗದವರು. ಚೌಧರಿ ಅವವರು ಪಶ್ಚಿಮ ಭಾಗದವರು. ಈ ಮೂಲಕ ಬಿಜೆಪಿಯು ಪ್ರಾದೇಶಿಕ ಸಮತೋಲನ ಕಾಯ್ದುಕೊಳ್ಳುವ ಪ್ರಯತ್ನ ಮಾಡಿದೆ ಎಂದು ಹೇಳಲಾಗಿದೆ.

ಹಿಮಾಚಲ ಪ್ರದೇಶದಲ್ಲಿ ನವೆಂಬರ್‌ನಲ್ಲಿ ಮತ್ತು ತ್ರಿಪುರಾ ಮುಂದಿನ ವರ್ಷ ಮಾರ್ಚ್‌ನಲ್ಲಿ ವಿಧಾನಸಭಾ ಚುನಾವಣೆಗಳು ನಡೆಯುವ ಸಾಧ್ಯತೆಗಳಿವೆ.

ತ್ರಿಪುರಾ ರಾಜ್ಯ ಘಟಕವು ಮುಖ್ಯಮಂತ್ರಿ ಮಾಣಿಕ ಶಾ ಅವರ ರಾಜೀನಾಮೆಯಿಂದ ತೆರವಾಗಿತ್ತು.

ಇದನ್ನೂ ಓದಿ:ಬಿಜೆಪಿ ರಾಜ್ಯ ಘಟಕಗಳ ಪ್ರಮುಖ ಹುದ್ದೆಗಳಲ್ಲಿ ಬದಲಾವಣೆ ನಿರೀಕ್ಷೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.