ಪಟ್ನಾ: ಬಿಹಾರದಲ್ಲಿ ರಾಜಕೀಯ ಚಟುವಟಿಕೆಗಳು ತೀವ್ರ ಬಿರುಸುಗೊಂಡಿರುವ ಮಧ್ಯೆಯೇ, ಜೆಡಿ(ಯು) ನಾಯಕ ಉಪೇಂದ್ರ ಕುಶ್ವಾಹ ಮಾಡಿರುವ ಟ್ವೀಟೊಂದು ಅವರ ಪಕ್ಷವು ಬಿಜೆಪಿ ಜತೆಗಿನ ಮೈತ್ರಿ ಕಡಿದುಕೊಂಡಿರುವ ಸ್ಪಷ್ಟ ಸುಳಿವು ನೀಡಿದೆ.

ಹೊಸ ಒಕ್ಕೂಟದ ನಾಯಕತ್ವ ವಹಿಸಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಅಭಿನಂದನೆಗಳು ಎಂದು ಕುಶ್ವಾಹ ಟ್ವೀಟ್ ಮಾಡಿದ್ದಾರೆ.

ಬಿಹಾರ ರಾಜಕೀಯ: ಹೊಸ ಸರ್ಕಾರ ರಚನೆಯಾದರೆ ನಿತೀಶ್ ಕುಮಾರ್ಗೇ ಸಿಎಂ ಹುದ್ದೆ

‘ಹೊಸ ರೂಪದಲ್ಲಿ ಹೊಸ ಒಕ್ಕೂಟದ ನಾಯಕತ್ವದ ಹೊಣೆಗಾರಿಕೆ ವಹಿಸಿಕೊಳ್ಳುತ್ತಿರುವುದಕ್ಕಾಗಿ ನಿತೀಶ್ ಕುಮಾರ್ ಅವರಿಗೆ ಅಭಿನಂದನೆಗಳು. ನಿತೀಶ್ ಅವರೇ, ಹೀಗೆಯೇ ಮುಂದುವರಿಯಿರಿ. ದೇಶ ನಿಮಗಾಗಿ ಕಾಯುತ್ತಿದೆ’ ಎಂದು ಕುಶ್ವಾಹ ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಬಿಹಾರ ರಾಜಕೀಯ ಬಿಕ್ಕಟ್ಟು: ಪ್ರಮುಖ ನಾಯಕರನ್ನು ದೆಹಲಿಗೆ ಕರೆದ ಬಿಜೆಪಿ

ಈ ಮಧ್ಯೆ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಜತೆ ನಿತೀಶ್ ಕುಮಾರ್ ಅವರು ರಾಜಭವನಕ್ಕೆ ತೆರಳಿದ್ದಾರೆ ಎಂದು ಮೂಲಗಳು ಹೇಳಿವೆ.

ಇದಕ್ಕೂ ಮುನ್ನ, ‘ಬಿಹಾರದಲ್ಲಿ ಹೊಸ ಸರ್ಕಾರ ರಚನೆಯಾದರೆ ನಿತೀಶ್ ಕುಮಾರ್ ಅವರೇ ಮುಖ್ಯಮಂತ್ರಿಯಾಗಲಿದ್ದಾರೆ. ಬಹುಶಃ ಒಂದೆರಡು ದಿನಗಳಲ್ಲಿ ಈ ವಿದ್ಯಮಾನ ನಡೆಯಲಿದೆ’ ಎಂದು ಜೆಡಿ(ಯು) ಉನ್ನತ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿದ್ದವು.

ನಿತೀಶ್ ಬಿಜೆಪಿ ಮೈತ್ರಿ ಕೊನೆಗೊಳಿಸಿದರೆ ಜೆಡಿಯು ಜತೆ ಸೇರಲು ಸಿದ್ಧ: ಆರ್‌ಜೆಡಿ

ಬಿಹಾರ ರಾಜಕಾರಣದಲ್ಲಿ ಬದಲಾವಣೆ ಸುಳಿವು?: ಸೋನಿಯಾ ಜತೆ ನಿತೀಶ್ ಕುಮಾರ್ ಮಾತುಕತೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.