ಗಯಾ: ತಾಂತ್ರಿಕ ದೋಷದ ಕಾರಣ ವಾಯುಪಡೆಯ ಚಿಕ್ಕಗಾತ್ರದ ಯುದ್ಧವಿಮಾನವೊಂದು ಬಯಲಿನಲ್ಲಿ ಭೂಸ್ಪರ್ಶ ಮಾಡಿರುವ ಘಟನೆ ಬಿಹಾರದ ಗಯಾ ಜಿಲ್ಲೆಯ ಬಾಗ್ದಾಹ ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ. ಅದರಲ್ಲಿದ್ದ ಇಬ್ಬರು ಪೈಲಟ್‌ಗಳು ಸುರಕ್ಷಿತವಾಗಿ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೇನಾಧಿಕಾರಿಗಳ ತರಬೇತಿ ಸಂಸ್ಥೆಯ (ಒಟಿಎ) ಯುದ್ಧವಿಮಾನ ಇದಾಗಿದೆ. ಹಾರಾಟ ಆರಂಭಿಸಿದ ಕೆಲವೇ ನಿಮಿಷಗಳಲ್ಲಿ ವಿಮಾನದಲ್ಲಿ ಸಮಸ್ಯೆ ಕಾಣಿಸಿಕೊಂಡು, ದೊಡ್ಡ ಸದ್ದು ಬಂದ ಕಾರಣ ಬಯಲಿನಲ್ಲಿ ಭೂಸ್ಪರ್ಶ ಮಾಡಿದೆ.

ವಿಮಾನದಲ್ಲಿದ್ದ ತರಬೇತಿ ಪೈಲಟ್‌ಗಳನ್ನು ಗ್ರಾಮಸ್ಥರು ರಕ್ಷಿಸಿ ಪೊಲೀಸರಿಗೆ ಮಾಹಿತಿ ನೀಡಿದರು. ಇಬ್ಬರಿಗೂ ಚಿಕ್ಕಪುಟ್ಟ ಗಾಯಗಳಾಗಿವೆ. ಘಟನೆಯಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗೆ ಯಾವುದೇ ಹಾನಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.