ಅಹಮದಾಬಾದ್: ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದ ಎಲ್ಲಾ 11 ಅಪರಾಧಿಗಳು ಸುಪ್ರೀಂ ಕೋರ್ಟ್ ವಿಧಿಸಿದ್ದ ಗಡುವು ಮುಗಿಯುವ ಕೆಲವೇ ಕ್ಷಣಗಳ ಮುನ್ನ, ಭಾನುವಾರ ರಾತ್ರಿ 11:30ಕ್ಕೆ ಗೋಧ್ರಾ ಉಪ ಕಾರಾಗೃಹದ ಅಧಿಕಾರಿಗಳ ಮುಂದೆ ಶರಣಾದರು.

ಶರಣಾಗಲು ಹೆಚ್ಚುವರಿ ಕಾಲಾವಕಾಶ ನೀಡಬೇಕು ಎಂದು ಅಪರಾಧಿಗಳು ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿತ್ತು.

ಅಪರಾಧಿಗಳು ಎರಡು ಖಾಸಗಿ ವಾಹನಗಳಲ್ಲಿ ಕಾರಾಗೃಹದ ಎದುರು ಬಂದಿಳಿದರು. ಈ ವೇಳೆ ಜೈಲಿನ ಹೊರಗೆ ಹೆಚ್ಚುವರಿ ಭದ್ರತೆ ನಿಯೋಜಿಸಲಾಗಿತ್ತು.

ಶೈಲೇಶ್ ಭಟ್ಬಾ, ಬಕಾಭಾಯ್ ವೊಹಾನಿಯಾ, ಬಿಪಿನ್ ಚಂದ್ರ ಜೋಷಿ, ಕೇಸರ್ಭಾಯ್ ವೊಹಾನಿಯಾ, ಗೋವಿಂದ ನಾಯ್, ಜಸ್ವಂತ ನಾಯ್, ಮಿತೇಶ್ ಭಟ್, ಪ್ರದೀಪ್ ಮೊರ್ಧಿಯಾ, ರಾಧೇಶ್ಯಾಮ್ ಶಾ, ರಾಜುಭಾಯ್ ಸೋನಿ, ರಮೇಶ್ ಚಂದನ ಅವರು ಶರಣಾದ ಅಪರಾಧಿಗಳು.

ಇವರಿಗೆ ಗುಜರಾತ್ ಸರ್ಕಾರವು ಕ್ಷಮಾದಾನ ನೀಡಿ, ಅವರನ್ನು ಜೈಲಿನಿಂದ ಬಿಡುಗಡೆ ಮಾಡಿತ್ತು. ಆದರೆ, ಅವರ ಬಿಡುಗಡೆಯನ್ನು ಸುಪ್ರೀಂ ಕೋರ್ಟ್ ಜನವರಿ 8ರಂದು ರದ್ದುಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.