ನವದೆಹಲಿ: ಶರಣಾಗಲು ಹೆಚ್ಚಿನ ಕಾಲಾವಕಾಶ ನೀಡಬೇಕು ಎಂದು ಕೋರಿ, ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಹಾಗೂ ಆಕೆಯ ಕುಟುಂಬಸ್ಥರ ಕೊಲೆ ಪ್ರಕರಣ ದೋಷಿಗಳ ಪೈಕಿ ಮೂವರು ಗುರುವಾರ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ್ದಾರೆ.

ನ್ಯಾಯಮೂರ್ತಿಗಳಾದ ಬಿ.ವಿ ನಾಗರತ್ನ ಹಾಗೂ ಸಂಜಯ್ ಕರೊಲ್ ಅವರ ಪೀಠದ ಮುಂದೆ ಮನವಿ ಸಲ್ಲಿಸಲಾಗಿದ್ದು, ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರ ಪೀಠದ ಮುಂದೆ ಇಡುವಂತೆ ರಿಜಿಸ್ಟ್ರಿಗೆ ಸೂಚಿಸಲಾಗಿದೆ.
.ಮಂದಹಾಸ ಮೂಡಿದೆ, ಮಕ್ಕಳನ್ನು ಅಪ್ಪಿಕೊಂಡಿದ್ದೇನೆ: ಬಿಲ್ಕಿಸ್ ಬಾನು.
ಶರಣಾಗಲು ಹೆಚ್ಚಿನ ಕಾಲಾವಕಾಶ ನೀಡಬೇಕು ಎಂದು ಮೂವರು ಕೋರಿದ್ದಾರೆ. ಆದರೆ ಪೀಠ ಪುನರ್ ರಚನೆ ಆಗಬೇಕಾಗಿರುವುದರಿಂದ, ರಿಜಿಸ್ಟ್ರಿ ಸಿಜೆಐ ಅವರಿಂದ ನಿರ್ದೇಶನ ತೆಗೆದುಕೊಳ್ಳಬೇಕು’ ಎಂದು ಪೀಠ ಹೇಳಿದೆ.

ಪ್ರಕರಣದ 11 ದೋಷಿಗಳನ್ನು ಬಿಡುಗಡೆ ಮಾಡಿದ ಗುಜರಾತ್ ಸರ್ಕಾರದ ನಿರ್ಧಾರವನ್ನು ಜನವರಿ 8ರಂದು ಸುಪ್ರೀಂ ಕೋರ್ಟ್ ರದ್ದು ಮಾಡಿತ್ತು. ಅಲ್ಲದೆ ಎರಡು ವಾರದೊಳಗೆ ಶರಣಾಗಬೇಕು ಎಂದು ಆದೇಶಿಸಿತ್ತು.
.ಬಿಲ್ಕಿಸ್ ಬಾನು ಪ್ರಕರಣ| ಕ್ಷಮೆ ಪ್ರಶ್ನೆ ಅಧಿಕ ಪ್ರಸಂಗತನ ಎಂದ ಗುಜರಾತ್ ಸರ್ಕಾರ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.