ನವದೆಹಲಿ: ಬಿಲ್ಕಿಸ್ ಬಾನು ಪ್ರಕರಣದಲ್ಲಿ 11 ಅಪರಾಧಿಗಳ ಬಿಡುಗಡೆಗೆ ನಿರ್ಧಾರ ಕೈಗೊಂಡಿದ್ದ ಗುಜರಾತ್ ಸರ್ಕಾರದ ನಿರ್ಧಾರವನ್ನು ರದ್ದುಪಡಿಸಿದ ಸುಪ್ರೀಂ ಕೋರ್ಟ್ ತೀರ್ಪಿನ ಬೆನ್ನಲ್ಲೇ, ‘ಅಪರಾಧಿಗಳನ್ನು ಯಾರು ರಕ್ಷಿಸುತ್ತಿದ್ದಾರೆ ಎಂಬುದು ಈ ತೀರ್ಪು ತೋರಿಸಿದೆ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಗುಜರಾತ್‌ನಲ್ಲಿ 2002ರಲ್ಲಿ ಸಂಭವಿಸಿದ ಕೋಮು ಗಲಭೆಯಲ್ಲಿ ಬಿಲ್ಕಿಸ್ ಬಾನು ಅವರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಹಾಗೂ ಅವರ ಕುಟುಂಬದ ಸದಸ್ಯರನ್ನು ಹತ್ಯೆಗೈದಿದ್ದ 11 ಅಪರಾಧಿಗಳನ್ನು ಗುಜರಾತ್ ಸರ್ಕಾರ ಬಿಡುಗಡೆ ಮಾಡಿತ್ತು. ಈ ಆದೇಶವನ್ನು ರದ್ದುಪಡಿಸಿದ ಸುಪ್ರೀಂ ಕೋರ್ಟ್, ಮುಂದಿನ 2 ವಾರದೊಳಗೆ ಅಪರಾಧಿಗಳು ಜೈಲಿಗೆ ಮರಳುವಂತೆ ಆದೇಶಿಸಿದೆ.

‘ಮಹಿಳೆಯೊಬ್ಬರು ಯಾವುದೇ ಮತಕ್ಕೆ ಸೇರಿರಬಹುದು ಅಥವಾ ಯಾವುದೇ ನಂಬಿಕೆಯನ್ನು ಅನುಸರಿಸುತ್ತಿರಬಹುದು. ಆದರೆ ಅವರ ಮೇಲೆ ಘೋರ ಅಪರಾಧ ನಡೆಸಿದವರಿಗೆ ಕ್ಷಮಾಪಣೆ ನೀಡಲು ಸಾಧ್ಯವೇ’ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಹಾಗೂ ನ್ಯಾ. ಉಜ್ಜಲ್ ಭುಯಾನ್ ಅವರಿದ್ದ ಪೀಠವು ಗುಜರಾತ್ ಸರ್ಕಾರವನ್ನು ಖಾರವಾಗಿ ಪ್ರಶ್ನಿಸಿದೆ.

ಇದನ್ನೇ ಉಲ್ಲೇಖಿಸಿ ಮೈಕ್ರೊ ಬ್ಲಾಗಿಂಗ್ ‘ಎಕ್ಸ್’ ವೇದಿಕೆಯಲ್ಲಿ ಬರೆದುಕೊಂಡಿರುವ ರಾಹುಲ್ ಗಾಂಧಿ, ‘ಚುನಾವಣಾ ಲಾಭಕ್ಕಾಗಿ ನ್ಯಾಯದ ಕೊಲೆಗೈಯ್ಯುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ. ಅಪರಾಧಿಗಳಿಗೆ ಯಾರು ನೆರವಾಗುತ್ತಿದ್ದಾರೆ ಎಂಬುದನ್ನು ಸುಪ್ರೀಂ ಕೋರ್ಟ್‌ನ ಇಂದಿನ ತೀರ್ಪು ಸಾಬೀತುಪಡಿಸಿದೆ’ ಎಂದಿದ್ದಾರೆ.

‘ಬಿಲ್ಕಿಸ್ ಬಾನು ಅವರ ಈ ದಣಿವರಿಯದ ಪ್ರಯತ್ನವು ದುರಹಂಕಾರಿ ಬಿಜೆಪಿ ಸರ್ಕಾರದ ವಿರುದ್ಧದ ನ್ಯಾಯದ ಗೆಲುವಾಗಿದೆ’ ಎಂದಿದ್ದಾರೆ.

2002ರಲ್ಲಿ ಘಟನೆ ನಡೆಯುವಾಗ ಬಿಲ್ಕಿಸ್ ಬಾನೂ 21 ವರ್ಷದವರಾಗಿದ್ದರು. ಜತೆಗೆ 5 ತಿಂಗಳ ಗರ್ಭಿಣಿಯಾಗಿದ್ದರು. ಅದೇ ವರ್ಷ ಫೆಬ್ರುವರಿಯಲ್ಲಿ ಗೋಧ್ರಾ ರೈಲಿನ ಅಗ್ನಿ ದುರಂತದ ನಂತರ ಬುಗಿಲೆದ್ದ ಕೋಮು ಗಲಭೆಯಲ್ಲಿ ಬಿಲ್ಕಿಸ್ ಅವರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಅವರ ಮೂರು ವರ್ಷದ ಮಗಳು ಸಹಿತ ಕುಟುಂಬದ ಏಳು ಜನರನ್ನು ಹತ್ಯೆ ಮಾಡಲಾಗಿತ್ತು. ಇದರಲ್ಲಿ ಭಾಗಿಯಾಗಿದ್ದ 11 ಜನರಿಗೆ ಜೀವಾವಧಿ ಶಿಕ್ಷೆ ಪ್ರಕಟಗೊಂಡಿತ್ತು. 2022ರ ಆಗಸ್ಟ್ 15ರಂದು ಗುಜರಾತ್ ಸರ್ಕಾರ ಈ 11 ಜನರನ್ನು ಬಿಡುಗಡೆಗೊಳಿಸಿ ಆದೇಶಿಸಿತ್ತು.
.ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣ: ಕಡತ ಕೋರ್ಟ್ಗೆ ನೀಡಲು ಗುಜರಾತ್ ಹಿಂದೇಟು.ಬಿಜೆಪಿ ಸಂಸದ, ಶಾಸಕನೊಂದಿಗೆ ವೇದಿಕೆ ಹಂಚಿಕೊಂಡ ಬಿಲ್ಕಿಸ್ ಬಾನು ಅತ್ಯಾಚಾರ ಅಪರಾಧಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.