ನವದೆಹಲಿ : ದೆಹಲಿಯ ಸೇವಾ ವಿಷಯಗಳ ಆಡಳಿತಾತ್ಮಕ ನಿಯಂತ್ರಣ ಕುರಿತ ಸುಗ್ರೀವಾಜ್ಞೆಗೆ ಕಾಯ್ದೆಯ ರೂಪ ನೀಡಲು ಮಂಡಿಸುವ ಮಸೂದೆಯನ್ನು ಅಂಗೀಕರಿಸಬಾರದು ಎಂದು ಕೋರಿ ರಾಜ್ಯಸಭಾ ಸಭಾಪತಿ ಜಗದೀಪ್ ಧನಕರ್ ಅವರಿಗೆ ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದ ರಾಘವ್ ಛಡ್ಡಾ ಅವರು ಭಾನುವಾರ ಪತ್ರ ಬರೆದಿದ್ದಾರೆ.

ಮಸೂದೆಯನ್ನು ‘ಅಸಾಂವಿಧಾನಿಕ’ ಎಂದು ಕರೆದಿರುವ ಅವರು, ಮಸೂದೆಯನ್ನು ಹಿಂಪಡೆಯುವಂತೆ ಬಿಜೆಪಿಗೆ ನಿರ್ದೇಶನ ನೀಡಬೇಕು ಮತ್ತು ಸಂವಿಧಾನವನ್ನು ರಕ್ಷಿಸಬೇಕು ಎಂದು ಮನವಿ ಮಾಡಿದ್ದಾರೆ. ಮುಂಗಾರು ಅಧಿವೇಶನದ ವೇಳೆ ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಈ ಮಸೂದೆಯನ್ನು ಮಂಡಿಸುವ ಸಾಧ್ಯತೆ ಇದೆ.

ಈ ಮಧ್ಯೆ ಸುಗ್ರೀವಾಜ್ಞೆ ಪ್ರಶ್ನಿಸಿ ದೆಹಲಿ ಸರ್ಕಾರ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸಂವಿಧಾನ ಪೀಠಕ್ಕೆ ವರ್ಗಾಯಿಸಿದೆ. ಸೇವಾ ವಿಷಯಗಳ ಆಡಳಿತಾತ್ಮಕ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕಾಯ್ದೆ ರೂಪಿಸುವ ಮೂಲಕ ದೆಹಲಿ ಸರ್ಕಾರ ಹೊಂದಿರುವ ಅಧಿಕಾರವನ್ನು ಸಂಸತ್ ರದ್ದು ಮಾಡಬಹುದೇ ಎಂಬ ಬಗ್ಗೆ ಸಂವಿಧಾನ ಪೀಠ ಪರಿಶೀಲನೆ ನಡೆಸಲಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.