ನವದೆಹಲಿ: ಕೇಂದ್ರಾಡಳಿತ ಪ್ರದೇಶಗಳಾದ ಪುದುಚೇರಿ, ಜಮ್ಮ ಮತ್ತು ಕಾಶ್ಮೀರಕ್ಕೂ ಮಹಿಳಾ ಮೀಸಲಾತಿ ಮಸೂದೆಯ ಉಪಲಬ್ಧತೆಯನ್ನು ವಿಸ್ತರಿಸುವ ಪ್ರಸ್ತಾವ ಹೊಂದಿರುವ ಎರಡು ಮಸೂದೆಗಳನ್ನು ಮಂಗಳವಾರ ಲೋಕಸಭೆಯಲ್ಲಿ ಮಂಡಿಸಲಾಯಿತು.

ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್ ಅವರು ಜಮ್ಮು ಮತ್ತು ಕಾಶ್ಮೀರ ಮರುಜೋಡಣೆ –2019 (ಎರಡನೇ ತಿದ್ದುಪಡಿ) ಮಸೂದೆ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳ (ತಿದ್ದುಪಡಿ) ಮಸೂದೆಯನ್ನು ಲೋಕಸಭೆಗೆ ಪರಿಚಯಿಸಿದರು.

ಜಮ್ಮು ಮತ್ತು ಕಾಶ್ಮೀರ ಮರುಜೋಡಣಾ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಮಹಿಳೆಯರಿಗೆ ರಾಜ್ಯಗಳ ವಿಧಾನಸಭೆಯಲ್ಲಿ ಶೇ 33 ಮೀಸಲಾತಿ ನೀಡಲಾಗಿರುವ ಸಂವಿಧಾನದ 106ನೇ ತಿದ್ದುಪಡಿ ಕಾಯ್ದೆಯನ್ನು ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲೂ ಜಾರಿ ಮಾಡಬೇಕು. ಮಹಿಳಾ ಮೀಸಲಾತಿ ಮಸೂದೆಯನ್ನು ಪುದುಚೇರಿಗೂ ವಿಸ್ತರಿಸಲು, ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳ ಕಾಯ್ದೆ–1963ಕ್ಕೆ ತಿದ್ದುಪಡಿ ತರಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.

ಈ ಎರಡೂ ಮಸೂದೆಗಳಿಗೆ ಲೋಕಸಭೆಯಲ್ಲಿ ಅಂಗೀಕಾರ ದೊರೆತರೆ ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭೆಗಳಲ್ಲಿ ಮಹಿಳೆಯರ ಪ್ರಾತಿನಿಧ್ಯ ಹೆಚ್ಚುತ್ತದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.