ನವದೆಹಲಿ: ರೋಹಿಂಗ್ಯಾ ಮುಸ್ಲಿಮರು ಮತ್ತು ಇತರ ಅಕ್ರಮ ವಲಸಿಗರ ಬಯೊಮೆಟ್ರಿಕ್ ಮಾಹಿತಿ ಸಂಗ್ರಹಿಸುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಈ ಮಾಹಿತಿ ಸಂಗ್ರಹಕ್ಕೆ ಸ್ಥಳೀಯ ಪೊಲೀಸ್ ಠಾಣೆಗಳಿಗೆ ನಿರ್ದೇಶಿಸುವಂತೆ ತಿಳಿಸಿದೆ.

‘ದೇಶದಾದ್ಯಂತ ಕೈಗೊಳ್ಳುತ್ತಿರುವ ಭದ್ರತಾ ಕ್ರಮಗಳ ಭಾಗವಾಗಿ ಈ ಕ್ರಮಕ್ಕೆ ಮುಂದಾಗಲಾಗಿದೆ. ಇದರಿಂದ, ದೇಶದ ವಿವಿಧೆಡೆ ಸಂಚರಿಸುವ ಅಕ್ರಮ ವಲಸಿಗರನ್ನು ಕಂಡುಹಿಡಿಯಲು ಸಾಧ್ಯವಾಗುತ್ತದೆ’ ಎಂದು ಗೃಹಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಅಕ್ರಮ ವಲಸಿಗರ ಬಯೊಮೆಟ್ರಿಕ್ ಸಂಗ್ರಹಿಸಿದ ಮಾತ್ರಕ್ಕೆ ಅವರಿಗೆ ಅಧಿಕೃತ ಗುರುತಿನ ದಾಖಲೆ ನೀಡಲಾಗುತ್ತದೆ ಎಂದರ್ಥವಲ್ಲ ಎಂದೂ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ದೇಶದಲ್ಲಿರುವ ರೋಹಿಂಗ್ಯಾ ಮುಸ್ಲಿಂ ವಲಸಿಗರು ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದ್ದಾರೆ; ಅವರ ಅಕ್ರಮ ಒಳನುಸುಳುವಿಕೆ ತಡೆಯಲು ಭದ್ರತಾ ಪಡೆಗಳನ್ನು ನಿಯೋಜಿಸಲಾಗುತ್ತಿದೆ ಎಂದು ಜುಲೈನಲ್ಲಿ ಗೃಹಸಚಿವ ರಾಜನಾಥ್ ಸಿಂಗ್ ಸಂಸತ್ತಿನಲ್ಲಿ ತಿಳಿಸಿದ್ದರು.

ಅಂಕಿ ಅಂಶ (ಭಾರತದಲ್ಲಿ)

14 ಸಾವಿರ:ರೋಹಿಂಗ್ಯಾ ಮುಸ್ಲಿಮರು ವಿಶ್ವಸಂಸ್ಥೆಯ ನಿರಾಶ್ರಿತರ ಹೈ ಕಮಿಷನ್ನಲ್ಲಿ ನೋಂದಣಿ ಮಾಡಿಸಿಕೊಂಡಿದ್ದಾರೆ

40 ಸಾವಿರ:ರೋಹಿಂಗ್ಯಾ ಮುಸ್ಲಿಮರು ಅಕ್ರಮವಾಗಿ ನೆಲೆಸಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.