ಕೋಯಿಕ್ಕೋಡ್ (ಕೇರಳ): ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಸರ್ಕಾರ ನಡೆಸುತ್ತಿರುವ ಕೋಳಿಫಾರಂನಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದ್ದು, 1,800 ಕೋಳಿಗಳು ಮೃತಪಟ್ಟಿವೆ ಎಂದು ಬುಧವಾರ ಅಧಿಕೃತ ಮೂಲಗಳು ತಿಳಿಸಿವೆ.

ಕೋಯಿಕ್ಕೋಡ್ ಜಿಲ್ಲಾ ಪಂಚಾಯಿತಿ ನಿರ್ವಹಿಸುತ್ತಿರುವ ಸ್ಥಳೀಯ ಫಾರಂನಲ್ಲಿ ರೂಪಾಂತರಿ ಎಚ್5ಎನ್1 ಕಾಣಿಸಿಕೊಂಡಿದೆ ಎಂದು ದೃಢಪಟ್ಟಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನು ತಡೆಗಟ್ಟಲು ಕೇಂದ್ರದ ಮಾರ್ಗಸೂಚಿಯ ಪ್ರಕಾರ ತುರ್ತು ಕ್ರಮವನ್ನು ಕೈಗೊಳ್ಳಬೇಕೆಂದು ಕೇರಳದ ಪಶುಸಂಗೋಪನೆ ಸಚಿವರಾದ ಜೆ ಚಿಂಚು ರಾಣಿ ಅವರು ಸೂಚನೆ ನೀಡಿದ್ದಾರೆ.

ಪ್ರಾಥಮಿಕ ಪರೀಕ್ಷೆಯಲ್ಲಿ ಹಕ್ಕಿ ಜ್ವರ ಎಂದು ತಿಳಿಸಿದ್ದರಿಂದ ರೋಗ ಪತ್ತೆ ಹಚ್ಚಲು ಹೆಚ್ಚಿನ ಪರೀಕ್ಷೆಗಾಗಿ ಭೋಪಾಲ್ನ ಪ್ರಯೋಗಾಲಯಕ್ಕೆ ಮಾದರಿಯನ್ನು ಕಳುಹಿಸಲಾಗಿದೆ ಸರ್ಕಾರದ ಹೇಳಿಕೆಯಲ್ಲಿದೆ.

ಫಾರಂನಲ್ಲಿ 5,000ಕ್ಕೂ ಹೆಚ್ಚು ಕೋಳಿಗಳಿದ್ದು, ಸೋಂಕಿನಿಂದ 1,800 ಕೋಳಿಗಳು ಮೃತಪಟ್ಟಿವೆ. ಇದನ್ನು ತಡೆಗಟ್ಟುವ ಅಂಗವಾಗಿ ಜಿಲ್ಲೆಯ ವಿವಿಧ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.